ನಾಪೋಕ್ಲು, ಆ. ೬: ಮೂರ್ನಾಡು ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕವನ್ನು ಕಡಂಗದ ವಿಜಯ ಪ್ರೌಢಶಾಲಾ ಮುಖ್ಯ ಶಿಕ್ಷಕ ಸೋಮಶೇಖರ್ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಯುವಕರು ಸಮಾಜಮುಖಿಯಾಗಿ ತೊಡಗಿಸಿಕೊಂಡರೆ ದೇಶದ ಅಭಿವೃದ್ಧಿ ಸಾಧ್ಯ. ಹಾಗೆಯೇ, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂರ್ನಾಡು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕ್ಕಿ ವಹಿಸಿದ್ದರು. ಈ ಸಂದರ್ಭ ಮೂರ್ನಾಡು ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಪುದಿಯೊಕ್ಕಡ ಸುಬ್ರಮಣಿ, ಕಾರ್ಯದರ್ಶಿ ಪೆಮ್ಮಡಿಯಂಡ ವೇಣು ಅಪ್ಪಣ್ಣ, ಎನ್ಎಸ್ಎಸ್ ಯೋಜನಾಧಿಕಾರಿ ದಮಯಂತಿ, ಉಪನ್ಯಾಸಕಿ ಮಾಲತಿ ಮತ್ತಿತರರು ಇದ್ದರು.