ಸೋಮವಾರಪೇಟೆ, ಆ. ೬: ತಾಲೂಕಿನ ಗೌಡಳ್ಳಿ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸಮವಸ್ತç ವಿತರಣಾ ಕಾರ್ಯಕ್ರಮ ನಡೆಯಿತು.

ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕಿನ ಅಧ್ಯಕ್ಷ ಹೆಚ್.ಆರ್. ಸುರೇಶ್ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿ, ವಿದ್ಯಾರ್ಥಿ ದಿಸೆಯಿಂದಲೇ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಎಲ್ಲಾ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸ್ಥೆöÊರ್ಯ ಬೆಳೆಸಿಕೊಳ್ಳುವ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬದುಕಬೇಕು ಎಂದರು.

ಕುಶಾಲನಗರ ಡಿಸಿಸಿ ಬ್ಯಾಂಕ್ ಹಿರಿಯ ಉದ್ಯೋಗಿ ಜಯಪ್ರಕಾಶ್ ಅವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸಮವಸ್ತçಗಳನ್ನು ಕೊಡುಗೆಯಾಗಿ ನೀಡಿದರು. ಇದೇ ಸಂದರ್ಭ ೨೦೨೧-೨೨ನೇ ಸಾಲಿನಲ್ಲಿ ೧೦ನೇ ತರಗತಿಯಲ್ಲಿ ವ್ಯಾಸಂಗ ಮಾಡಿ ಹೆಚ್ಚು ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ, ಪ್ರೋತ್ಸಾಹಧನ ವಿತರಣೆ ಮಾಡಲಾಯಿತು.

ಗೌಡಳ್ಳಿ ಗ್ರಾಮದ ಜಿ.ಎನ್. ಗಿರೀಶ್, ದೊಡ್ಡಮಳ್ತೆ ಗ್ರಾಮದ ಎಸ್.ಎಂ. ಜ್ಞಾನೇಶ್ವರಿ ಹಾಗೂ ಹೊನ್ನವಳ್ಳಿ ಗ್ರಾಮದ ಎಂ.ಪಿ. ಚೇತನ್ ಅವರುಗಳು ಪುರಸ್ಕಾರಕ್ಕೆ ಭಾಜನ ರಾದರು. ಶಾಲಾ ಮುಖ್ಯೋಪಾಧ್ಯಾಯ ಎನ್.ಕೆ. ನಾಗೇಂದ್ರ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಲೆಕ್ಕಿಗ ಶಿವಪ್ರಕಾಶ್, ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹೂವಯ್ಯ, ಗ್ರಾಮಸ್ಥರಾದ ಸುಬ್ರಮಣಿ ಹಾಗೂ ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.ರಾದರು. ಶಾಲಾ ಮುಖ್ಯೋಪಾಧ್ಯಾಯ ಎನ್.ಕೆ. ನಾಗೇಂದ್ರ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಲೆಕ್ಕಿಗ ಶಿವಪ್ರಕಾಶ್, ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹೂವಯ್ಯ, ಗ್ರಾಮಸ್ಥರಾದ ಸುಬ್ರಮಣಿ ಹಾಗೂ ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.