ಕುಶಾಲನಗರ, ಆ. ೬: ಕುಶಾಲನಗರ ಶ್ರೀ ಭಗೀರಥ ಉಪ್ಪಾರ ಯುವಕ ಸಂಘ ಮತ್ತು ಶ್ರೀ ಆದಿಶಕ್ತಿ ಅಂತರಘಟ್ಟೆ ಅಮ್ಮ ದೇವಸ್ಥಾನ ಸೇವಾ ಸಮಿತಿ ಆಶ್ರಯದಲ್ಲಿ ತಾ. ೯ ರಂದು ಶ್ರೀ ಮಹರ್ಷಿ ಭಗೀರಥ ಜಯಂತ್ಯೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಗೋವಿಂದರಾಜು ತಿಳಿಸಿದ್ದಾರೆ. ಅವರು, ಕುಶಾಲನಗರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ ಕುಶಾಲನಗರ ಎ.ಪಿ.ಸಿ.ಎಂ.ಎಸ್. ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೆರವೇರಿಸಲಿದ್ದಾರೆ ಎಂದರು.
ಮುಖ್ಯ ಭಾಷಣಕಾರರಾಗಿ ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಆಯುಕ್ತರಾದ ಡಿ. ಜಗನ್ನಾಥ್ ಸಾಗರ್ ಪಾಲ್ಗೊಳ್ಳಲಿದ್ದಾರೆ. ಮೆರವಣಿಗೆಯ ಉದ್ಘಾಟನೆಯನ್ನು ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಕೆ. ಗಿರೀಶ್ ಉಪ್ಪಾರ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭ ಮಾತನಾಡಿದ ಯುವಕ ಸಂಘದ ಗೌರವಾಧ್ಯಕ್ಷ ಬಿ.ಎಸ್. ಪರಮೇಶ್, ಅಂದು ಬೆಳಿಗ್ಗೆ ೮ ಗಂಟೆಗೆ ಬೈಚನಹಳ್ಳಿ ಶ್ರೀ ಆದಿಶಕ್ತಿ ಅಂತರಘಟ್ಟೆ ಅಮ್ಮ ದೇವಸ್ಥಾನದಿಂದ ಪೂರ್ಣ ಕುಂಭದೊAದಿಗೆ ತೆರಳಿ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಸಭಾಂಗಣಕ್ಕೆ ತೆರಳಲಾಗುವುದೆಂದು ಮಾಹಿತಿ ನೀಡಿದರು.
ಚದುರಿದ ಜನಾಂಗವನ್ನು ಒಗ್ಗೂಡಿಸಿ ಸರ್ಕಾರದ ಸೌಲಭ್ಯವನ್ನು ಪ್ರತಿಯೊಬ್ಬರಿಗೂ ತಲುಪಿಸುವ ಕೆಲಸ ವೇದಿಕೆಯ ಮೂಲಕ ಮಾಡಲಾಗುವುದು. ಈ ನಿಟ್ಟಿನಲ್ಲಿ ಕಾರ್ಯಕ್ರಮದಲ್ಲಿ ಜನಾಂಗ ಬಾಂಧವರು ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಯುವಕ ಸಂಘದ ಉಪಾಧ್ಯಕ್ಷ ಗಿರೀಶ್, ಕಾರ್ಯದರ್ಶಿ ಗಣೇಶ್, ಸದಸ್ಯ ರವಿ ಇದ್ದರು.