ಮಡಿಕೇರಿ, ಆ. ೬: ಕುಶಾಲನಗರದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಮತ್ತು ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ವಿದುಷಿ ಪ್ರೇಮಾಂಜಲಿ ಆಚಾರ್ಯ ಅವರಿಗೆ ಕಾವೇರಿ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಇವರು ಚಂದ್ರು ಆಚಾರ್ಯ ಅವರ ಪತ್ನಿ ಹಾಗೂ ನಾಟ್ಯ ಮಯೂರಿ ನೃತ್ಯ ಶಾಲೆಯ ಸಂಸ್ಥಾಪಕರು ಮತ್ತು ಗೋಣಿಕೊಪ್ಪಲು ವಿದ್ಯಾನಿಕೇತನ ಕಾಲೇಜಿನ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.