ಶನಿವಾರಸಂತೆ, ಆ. ೬: ವ್ಯಕ್ತಿಯ ಬೌದ್ಧಿಕ ಬೆಳವಣಿಗೆಯಲ್ಲಿ ಗ್ರಂಥಾಲಯಗಳ ಪಾತ್ರ ಶಿಕ್ಷಣ ಸಂಸ್ಥೆಗಳಿಗಿAತಲೂ ಮಹತ್ವದ್ದಾಗಿದೆ ಎಂದು ವಿಘ್ನೇಶ್ವರ ಬಾಲಕಿಯರ ವಿದ್ಯಾಸಂಸ್ಥೆ ಶಿಕ್ಷಕ ಕೆ.ಪಿ. ಜಯಕುಮಾರ್ ಅಭಿಪ್ರಾಯಪಟ್ಟರು.
ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯದಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಶನಿವಾರಸಂತೆ, ಆ. ೬: ವ್ಯಕ್ತಿಯ ಬೌದ್ಧಿಕ ಬೆಳವಣಿಗೆಯಲ್ಲಿ ಗ್ರಂಥಾಲಯಗಳ ಪಾತ್ರ ಶಿಕ್ಷಣ ಸಂಸ್ಥೆಗಳಿಗಿAತಲೂ ಮಹತ್ವದ್ದಾಗಿದೆ ಎಂದು ವಿಘ್ನೇಶ್ವರ ಬಾಲಕಿಯರ ವಿದ್ಯಾಸಂಸ್ಥೆ ಶಿಕ್ಷಕ ಕೆ.ಪಿ. ಜಯಕುಮಾರ್ ಅಭಿಪ್ರಾಯಪಟ್ಟರು.
ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯದಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಲಭ್ಯವಿರುವುದರಿಂದ ವಿದ್ಯಾರ್ಥಿಗಳು ಓದುವ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದರು.
ಕೌಶಲ್ಯಾಭಿವೃದ್ಧಿ ತರಬೇತಿ ಸಂಸ್ಥೆ ಸಂಯೋಜನಾಧಿಕಾರಿ ಸಂತೋಷ್ ಮಾತನಾಡಿ, ಡಿಜಿಟಲ್ ಗ್ರಂಥಾಲಯದ ಉದ್ದೇಶದ ಬಗ್ಗೆ ಮಾಹಿತಿಯಿತ್ತರು.
ಕಾರ್ಯಾಗಾರ ಉದ್ಘಾಟಿಸಿದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಿತಿನ್ ಹಾಗೂ ಗ್ರಂಥಾಲಯ ಮೇಲ್ವಿಚಾರಕಿ ಹಾಗೂ ಕಾರ್ಯಕ್ರಮ ಆಯೋಜಕಿ ಎಸ್.ಪಿ. ದಿವ್ಯಾ ಮಾತನಾಡಿದರು.
ಪಂಚಾಯಿತಿ ಸದಸ್ಯರಾದ ಡಿ.ಪಿ. ಬೋಜಪ್ಪ, ಸಿ.ಜೆ. ಗಿರೀಶ್, ಎಸ್.ಪಿ. ಭಾಗ್ಯ, ಜಾನಕಿ, ಭವಾನಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಂದ್ರ ಹಾಜರಿದ್ದರು.