ಮಡಿಕೇರಿ, ಆ. ೫: ಪ್ರಸಕ್ತ ಸಾಲಿಗೆ ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದಿಂದ ವೀರಶೈವ ಲಿಂಗಾಯಿತ ಯುವ ಜನರಿಗೆ ಕೌಶಲ್ಯ ಅಭಿವೃದ್ಧಿಪಡಿಸಿ ಉದ್ಯೋಗ ಮುಖಿಯನ್ನಾಗಿಸಲು ಸರ್ಕಾರದ ಸಂಸ್ಥೆಗಳಾದ ಐಟಿಐ, ಜಿಟಿಟಿಸಿ, ಕೆಜಿಟಿಟಿಐರಲ್ಲಿ ಅಲ್ಪಾವಧಿ ಕೋರ್ಸ್ಗಳ ಮೂಲಕ ಉಚಿತ ಕೌಶಲ್ಯ ತರಬೇತಿ ನೀಡಲು ಕೌಶಲ್ಯ ಕರ್ನಾಟಕ ತಂತ್ರಾAಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು hಣಣಠಿs://ತಿತಿತಿ.ಞಚಿushಚಿಟಞಚಿಡಿ.ಛಿom ಜಾಲತಾಣದಲ್ಲಿ ಅರ್ಜಿ ಸಲ್ಲಿಸಬಹುದು. ಅಥವಾ ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ hಣಣಠಿs://ಞvಟಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ನಿಗಮದ ಕೇಂದ್ರ ಕಚೇರಿಯ ದೂ. ೦೮೦-೨೨೮೬೫೫೨೨ ಹಾಗೂ ೯೯೦೦೦೧೨೩೫೨ ಅಥವಾ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ, ಮಡಿಕೇರಿ. ದೂ. ೦೮೨೭೨-೨೨೧೬೫೬ ಮುಖಾಂತರ ಕಚೇರಿ ವೇಳೆಯಲ್ಲಿ ಸಂಪರ್ಕಿ ಸಬಹುದು.

ಆನ್‌ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ತಾ. ೨೯ ರೊಳಗೆ ಸಲ್ಲಿಸಲು ಅವಕಾಶವಿದೆ. ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸುವಂತಿಲ್ಲ ಎಂದು ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.