ಕೂಡಿಗೆ, ಆ. ೫: ಭೂಮಿ ಮೇಲಿನ ನೈಸರ್ಗಿಕ ಸಂಪನ್ಮೂಲಗಳು ಹಾಗೂ ಪರಿಸರವನ್ನು ನಾಶಪಡಿಸದೆ ಭವಿಷ್ಯದ ದೃಷ್ಟಿಯಿಂದ ಕಾಪಾಡಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ, ರಾಷ್ಟಿçÃಯ ಹಸಿರು ಪಡೆಯ ಕೊಡಗು ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮಕುಮಾರ್ ಹೇಳಿದರು.

ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ ಹಾಗೂ ರಾಷ್ಟಿçÃಯ ಹಸಿರು ಪಡೆಯ ಕೊಡಗು ಜಿಲ್ಲಾ ಘಟಕ ಹಾಗೂ ತಾಲೂಕು ಜೀವ ವೈವಿಧ್ಯ ಮಂಡಳಿಯ ವತಿಯಿಂದ ಶಾಲೆಯ ಇಕೋ ಕ್ಲಬ್, ಎನ್.ಎಸ್.ಎಸ್. ಘಟಕ, ಎಸ್.ಡಿ.ಎಂ.ಸಿ. ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕದ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ಪ್ರಕೃತಿ ಸಂರಕ್ಷಣಾ ದಿನಾಚರಣೆ' ಅಂಗವಾಗಿ ಏರ್ಪಡಿಸಿದ್ದ ಪರಿಸರ ಜಾಗೃತಿ ಆಂದೋಲನದಲ್ಲಿ ಪ್ರಕೃತಿ ಸಂರಕ್ಷಣೆ ಕುರಿತು ಅವರು ಮಾಹಿತಿ ನೀಡಿದರು. ಮಕ್ಕಳಿಗೆ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ವಿಜ್ಞಾನ ಸಂಘದ ಉಸ್ತುವಾರಿ ಶಿಕ್ಷಕಿ ಬಿ.ಡಿ. ರಮ್ಯ, ಭೂಮಿಯ ಸಂರಕ್ಷಣೆ ಎಂದರೆ ಭೂಮಿಯನ್ನು ಮತ್ತು ಸಂಪನ್ಮೂಲಗಳನ್ನು ಮನುಷ್ಯರ ಶಾಶ್ವತ ಒಳಿತಿಗಾಗಿ ಬುದ್ಧಿವಂತಿಕೆಯಿAದ ಬಳಸುವುದು ಎಂದರ್ಥ ಎಂದು ಹೇಳಿದರು. ಶಿಕ್ಷಕರಾದ ಕೆ. ಗೋಪಾಲಕೃಷ್ಣ, ಎಂ.ಟಿ. ದಯಾನಂದ ಪ್ರಕಾಶ್, ಎಸ್.ಎಂ. ಗೀತಾ, ಅನ್ಸಿಲಾ ರೇಖಾ, ಶಾಲಾ ನಾಯಕಿ ಸಂಜನಾ, ವಿದ್ಯಾರ್ಥಿ ಸಂಘದ ಪ್ರತಿನಿಧಿಗಳು ಇದ್ದರು.