ಮಡಿಕೇರಿ, ಆ. ೬: ಕೊಡಗು ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ತಾ.೮ರಂದು ವಿಶೇಷ ಶಿಕ್ಷಣ ಕಾರ್ಯಕ್ರಮ ನಡೆಯಲಿದೆ.

ಜಿಲ್ಲೆಯ ಮಹಿಳಾ ಸಹಕಾರ ಸಂಘಗಳ ಅಧ್ಯಕ್ಷರುಗಳು, ಸದಸ್ಯರು, ಕಾರ್ಯದರ್ಶಿಗಳಿಗೆ ಸಹಕಾರ ಕಾಯ್ದೆ - ಕಾನೂನು, ಸರ್ಕಾರದಿಂದ ದೊರಕುವ ಸವಲತ್ತು ಹಾಗೂ ಮಹಿಳಾ ಆರೋಗ್ಯದ ಕುರಿತು ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡಲಿದ್ದಾರೆ.

ಅಂದು ಬೆಳಿಗ್ಗೆ ೧೧ ಗಂಟೆಗೆ ಕುಶಾಲನಗರ ಎಪಿಸಿಎಂಎಸ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಶ್ರೇಷ್ಠ ಮಹಿಳಾ ಸಹಕಾರಿ ಪ್ರಶಸ್ತಿ ಪುರಸ್ಕೃತೆ ಲೀಲಾ ಮೇದಪ್ಪ ಉದ್ಘಾಟಿಸಲಿದ್ದು, ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ. ಮನು ಮುತ್ತಪ್ಪ ಅಧ್ಯಕ್ಷತೆ ವಹಿಸಲಿದ್ದು, ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.