ಮಡಿಕೇರಿ, ಆ. ೬: ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ತಾ. ೮ರಂದು ಆಗಮಿಸಲಿದ್ದಾರೆ. ಬೆಳಿಗ್ಗೆ ೮.೩೦ಕ್ಕೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎ.ಆರ್. ರವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.