ಕಣಿವೆ, ಆ. ೬: ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಶಾಲನಗರ ರೋಟರಿ ಕ್ಲಬ್ ವತಿಯಿಂದ ಶಾಲೆಯ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್ ಹಾಗೂ ಕುಶಾಲನಗರ ಅರಣ್ಯ ವಲಯದ ಆಶ್ರಯದಲ್ಲಿ ‘ವನಸಿರಿ' ಎಂಬ ಹಸಿರು ಅಭಿಯಾನದಡಿ ಶಾಲಾವರಣದಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು.

ಗಿಡ ನೆಡುವ ಮೂಲಕ ‘ವನಸಿರಿ' ಕಾರ್ಯಕ್ರಮಕ್ಕೆ ಚಾಲನೆ ನೀಡಿದ ರೋಟರಿ ಕ್ಲಬ್ ಅಧ್ಯಕ್ಷ ಉಲ್ಲಾಸ್ ಕೃಷ್ಣ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದಲ್ಲಿ ಗಿಡನೆಟ್ಟು ಬೆಳೆಸುವ ಮೂಲಕ ಅದನ್ನು ಪೋಷಿಸಿ ಬೆಳೆಸಲು ಕಂಕಣಬದ್ಧರಾಗಬೇಕು ಎಂದರು. ಮಕ್ಕಳು ಚಿಕ್ಕಂದಿನಿAದಲೇ ತಮ್ಮನ್ನು ಪರಿಸರ ಸಂರಕ್ಷಣೆ, ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ರೋಟರಿ ಕ್ಲಬ್ ಉಪ ಗವರ್ನರ್ ಎಸ್.ಕೆ. ಸತೀಶ್ ಮಾತನಾಡಿದರು. ಕೂಡು ಮಂಗಳೂರು ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಹಾಗೂ ರಾಷ್ಟಿçÃಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಸಿಆರ್‌ಪಿ ಕೆ. ಶಾಂತಕುಮಾರ್, ಪರಿಸರ ಸಂರಕ್ಷಣೆಯ ಅಗತ್ಯತೆ ಕುರಿತು ಸುತ್ತಲಿನ ಪರಿಸರದಲ್ಲಿ ಗಿಡನೆಟ್ಟು ಬೆಳೆಸುವ ಮೂಲಕ ಅದನ್ನು ಪೋಷಿಸಿ ಬೆಳೆಸಲು ಕಂಕಣಬದ್ಧರಾಗಬೇಕು ಎಂದರು. ಮಕ್ಕಳು ಚಿಕ್ಕಂದಿನಿAದಲೇ ತಮ್ಮನ್ನು ಪರಿಸರ ಸಂರಕ್ಷಣೆ, ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ರೋಟರಿ ಕ್ಲಬ್ ಉಪ ಗವರ್ನರ್ ಎಸ್.ಕೆ. ಸತೀಶ್ ಮಾತನಾಡಿದರು. ಕೂಡು ಮಂಗಳೂರು ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಹಾಗೂ ರಾಷ್ಟಿçÃಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಸಿಆರ್‌ಪಿ ಕೆ. ಶಾಂತಕುಮಾರ್, ಪರಿಸರ ಸಂರಕ್ಷಣೆಯ ಅಗತ್ಯತೆ ಕುರಿತು ಮಾಹಿತಿ ನೀಡಿದರು.

ರೋಟರಿ ಕ್ಲಬ್‌ನ ಸಮುದಾಯ ವಿಭಾಗದ ಮುಖ್ಯಸ್ಥ ಎಂ.ಡಿ. ರಂಗಸ್ವಾಮಿ, ಶಾಲೆಯ ಮುಖ್ಯೋಪಾಧ್ಯಾಯಿನಿ ಹೆಚ್.ಎಸ್. ಸುಜಾತ, ಎಸ್.ಡಿ. ಎಂ.ಸಿ. ಅಧ್ಯಕ್ಷ ಕೆ.ಪಿ. ರೇವಣ್ಣ, ಸದಸ್ಯ ಗಿರಿಪ್ರಸಾದ್, ರೋಟರಿ ಕ್ಲಬ್‌ನ ಪದಾಧಿಕಾರಿಗಳಾದ ಡಾ. ಹರಿ ಎ. ಶೆಟ್ಟಿ, ಪಿ.ಆರ್. ನವೀನ್, ಎನ್.ಜಿ. ಪ್ರಕಾಶ್, ಸಿ.ಬಿ. ಹರೀಶ್, ಮಹೇಶ್ ನಲ್ವಾಡಿ, ಟಿ. ರವಿ, ರಾಣಿ ಉಲ್ಲಾಸ್, ಶಿಕ್ಷಕರು ಇತರರು ಇದ್ದರು. ವಿದ್ಯಾರ್ಥಿಗಳು ಪರಿಸರ ಗೀತೆ ಹಾಡಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತಗೊಂಡ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ವತಿಯಿಂದ ಬಹುಮಾನ ವಿತರಿಸಲಾಯಿತು.