ಸಿದ್ದಾಪುರ, ಆ. ೬: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಆರೋಪಿ ನೆಲ್ಲಿಹುದಿಕೇರಿಯ ಆಟೋ ಚಾಲಕ ರಹೀಂನನ್ನು ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ರಹೀಂನ ಆಟೋದಲ್ಲಿ ಬರುತ್ತಿದ್ದ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಬಗ್ಗೆ ಬಾಲಕಿಯು ಪೋಷಕರಿಗೆ ಮಾಹಿತಿ ನೀಡಿದ ನಂತರ ಪೋಷಕರು ಆಟೋ ಚಾಲಕನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ರಹೀಂ ಪರಾರಿಯಾಗಿದ್ದನು. ಆರೋಪಿಯನ್ನು ಶನಿವಾರ ಮಡಿಕೇರಿಯಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.