ಮಡಿಕೇರಿ, ಆ. ೬: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮಡಿಕೇರಿ ತಾಲೂಕು ಘಟಕದ ವತಿಯಿಂದ ೨೦೨೧-೨೨ ನೇ ಸಾಲಿನಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಈ ಫಲಿತಾಂಶ ಬರಲು ಕಾರಣಕರ್ತರಾದ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಹಾಗೂ ಶಿಕ್ಷಕ ವೃಂದದವರಿಗೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದಕ್ಕೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಸಂಚಾಲಕರಾದ ಹೆಚ್.ಎಲ್. ದಿವಾಕರ್, ಉತ್ತಮ ಸಮಾಜವನ್ನು ನಿರ್ಮಿಸುವ ನಿಟ್ಟಿನಲ್ಲಿ ಮುಂದಿನ ಪ್ರಜೆ ಗಳಾದ ಇಂದಿನ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ಅತಿ ಮುಖ್ಯ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವ್ಯಾಂಡಮ್ ಎಂಟರ್ ಪ್ರೆöÊಸಸ್ ಮಾಲೀಕ ದಾಮೋದರ್ ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಿಗೆ ಮತ್ತಷ್ಟು ಸಾಧನೆ ಮಾಡುವ ಹುಮ್ಮಸ್ಸು ಬರುತ್ತದೆ ಎಂದರು.

ಮುಖ್ಯ ಭಾಷಣಕಾರರಾಗಿದ್ದ ಶಕ್ತಿ ಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ. ಅನಂತಶಯನ ಅವರು ಮಾತನಾಡಿ, ಯಾವುದೇ ಕೆಲಸವಾ ದರೂ ಸಂಪೂರ್ಣವಾಗಿ ಯಶಸ್ಸು ಪಡೆಯಬೇಕಾದರೆ ಶ್ರಮಪಡಬೇಕಾಗು ತ್ತದೆ. ಯಶಸ್ಸು ಸಾಧಿಸಲು ಬಹಳ ತಾಳ್ಮೆಯಿಂದ ಕಾರ್ಯನಿರ್ವಹಿಸ ಬೇಕಾಗುತ್ತದೆ. ಸಾಧನೆಯ ಮೇರು ಶಿಖರವನ್ನು ಏರಬೇಕಾದರೆ ಎಲ್ಲರೊಡನೆ ಸಂಯಮದಿAದಿದ್ದು, ಎಲ್ಲರ ಪ್ರೀತಿ, ನಂಬಿಕೆಯನ್ನು ಉಳಿಸಿಕೊಳ್ಳಬೇಕಾಗುತ್ತದೆ ಎಂದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್. ವಿಜಯ ಮಾತನಾಡಿ, ಸರಕಾರಿ ವಿದ್ಯಾಸಂಸ್ಥೆಗಳಲ್ಲಿ ಉಪನ್ಯಾಸ ಮಾಡುವ ಉಪನ್ಯಾಸಕರು ತಮ್ಮ ಶಕ್ತಿ ಮೀರಿ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಮಾತನಾಡಿ, ಡಾ.ಬಿ.ಆರ್ ಅಂಬೇಡ್ಕರ್, ಬುದ್ಧ, ಬಸವಣ್ಣ ಅವರಂತಹ ವ್ಯಕ್ತಿಗಳನ್ನು ಆದರ್ಶವಾಗಿಟ್ಟುಕೊಂಡು ಜೀವನ ನಡೆಸಿದರೆ ಸಾಧನೆ ಸಾಧ್ಯವಾಗುತ್ತದೆ ಎಂದು ಹೇಳಿದರು.

ವೇದಿಕೆಯಲ್ಲಿ ಸ್ಕೌಟ್ ಗೈಡ್ಸ್ ಆಯುಕ್ತ ಜಿಮ್ಮಿ ಸಿಕ್ವೇರಾ, ಮುಖ್ಯೋಪಾಧ್ಯಾಯಿನಿ ನಳಿನಿ ಪಿ.ಕೆ, ಶಿಕ್ಷಣ ಇಲಾಖೆಯ ಕೃಷ್ಣಪ್ಪ, ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಚಂದ್ರಶೇಖರ್, ಜಿಲ್ಲಾ ಮುಖಂಡರಾದ ವೇಲುಸ್ವಾಮಿ,ನಗರ ಸಂಚಾಲಕರಾದ ಸಿದ್ದೇಶ್ವರ್, ಪ್ರಥಮ ದರ್ಜೆ ಗುತ್ತಿಗೆ ದಾರರಾದ ವಿಜಯ್ ಹಾಜರಿದ್ದರು.