ಸೋಮವಾರಪೇಟೆ, ಆ. ೭: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾ ಸಾಂಸ್ಕೃತಿಕ ಸಂಘದ ಉದ್ಘಾಟನೆ ಮತ್ತು ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಕಾಲೇಜು ಆವರಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಉದ್ಘಾಟಿಸಿದರು. ವಿದ್ಯಾರ್ಥಿ ಪಾರ್ಲಿಮೆಂಟ್ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಎಂ.ಬಿ. ಅಭಿಮನ್ಯು ಕುಮಾರ್, ಸದಸ್ಯ ಜೆ.ಸಿ. ಶೇಖರ್, ಉಪ ಪ್ರಾಂಶುಪಾಲ ಬಸವರಾಜಪ್ಪ, ಹಿರಿಯ ಉಪನ್ಯಾಸಕರಾದ ಎಂ.ಬಿ. ತಿಲೋತ್ತಮೆ, ವಿದ್ಯಾರ್ಥಿ ನಾಯಕ ಎ.ಯು. ದರ್ಶನ್ ಉಪಸ್ಥಿತರಿದ್ದರು.