ಸುಂಟಿಕೊಪ್ಪ, ಆ. ೭: ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದೂರವಿರಬೇಕು ಎಂದು ಬೆಟ್ಟದಪುರ ಸ.ಪ.ಪೂ. ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಡಾ. ಬಿ.ಆರ್. ಶಾಂತಲಕ್ಷಿö್ಮ ಸಲಹೆಯಿತ್ತರು.

ಮಾದಾಪುರ ಡಿ. ಚೆನ್ನಮ್ಮ ಪದವಿಪೂರ್ವ ಕಾಲೇಜಿನ ೨೦೨೨-೨೩ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳನ್ನು ಹುರಿದುಂಬಿಸುವಲ್ಲಿ ಪೋಷಕರ ಪಾತ್ರವೂ ಬಹಳ ಮುಖ್ಯ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸಿ.ಜಿ. ಮಂದಪ್ಪ ವಹಿಸಿದ್ದರು. ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾಗಿ ಬಿಂದು, ಶಾಲಾ ನಾಯಕನಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದ ಚಂದನ್, ಉಪನಾಯಕನಾಗಿ ರೋಷನ್ ಸೇರಿದಂತೆ ವಿವಿಧ ಸ್ಥಾನಗಳಿಗೆ ನೇಮಕಗೊಂಡ ವಿದ್ಯಾರ್ಥಿಗಳು ಪ್ರಮಾಣವಚನ ಸ್ವೀಕರಿಸಿದರು. ಶಿಕ್ಷಕಿ ಪ್ರಮೀಳಾ ಸ್ವಾಗತಿಸಿ, ರೀಟಾ ನಿರೂಪಿಸಿದರು.