ಕರಿಕೆ,ಆ.೭: ಕಳೆದ ಕೆಲ ದಿನಗಳಿಂದ ಈ ಭಾಗದಲ್ಲಿ ಸುರಿದ ವ್ಯಾಪಕ ಮಳೆಯಿಂದಾಗಿ ಭಾಗಮಂಡಲ- ಕರಿಕೆ ಅಂತರ್ ರಾಜ್ಯ ಹೆದ್ದಾರಿಯಲ್ಲಿ ಜಲಸ್ಪೋಟಗೊಂಡು ಭೂಕುಸಿತವಾದ ಪ್ರದೇಶಗಳಿಗೆ ಹಾಗೂ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಭಾಗಮಂಡಲ- ಕರಿಕೆ -ಕೇರಳ ಸಂಪರ್ಕ ರಸ್ತೆಯಲ್ಲಿ ಸುಮಾರು ಹದಿನೈದು ಕಡೆ ಬರೆಕುಸಿತ ಉಂಟಾಗಿರುವ ಸ್ಥಳಕ್ಕೆ ಶಾಸಕ ಕೆ.ಜಿ. ಬೋಪಯ್ಯ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಕರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೆ ವಾರ್ಡಿನ ಕೊಚ್ಚಿ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಮಳೆಯಿಂದಾಗಿ ಹಾನಿಯಾದ ರಾಮ (ಮೊದ್ರೆ) ಹಾಗೂ ಕೃಷ್ಣ ಅವರ ಮನೆಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ‘ಶಕ್ತಿ'ಗೆ ಪ್ರತಿಕ್ರಿಯೆ ನೀಡಿದ ಶಾಸಕರು ಬರೆ ಹಾಗೂ ಮರ ತೆರವು ಮಾಡಲು ಕ್ರಮ ವಹಿಸಲಾಗುವುದು. ಮಳೆ ಕಡಿಮೆಯಾದ ಕೂಡಲೇ ಮಳೆಹಾನಿ ಪರಿಹಾರದಡಿ ದುರಸ್ತಿ ಮಾಡಲಾಗುವುದು. ಅಲ್ಲದೆ ಈ ಭಾಗದಲ್ಲಿ ಸಂಚರಿಸುವ ಸಾರಿಗೆ ಬಸ್ ಸೇವೆ ಸ್ಥಗಿತಗೊಂಡಿದ್ದು ಇದನ್ನು ಮರು ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದರಲ್ಲದೇ ಕರಿಕೆ ಭಾಗದಲ್ಲಿ ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡಲು ಸ್ಥಳ ಪರಿಶೀಲನೆ ನಡೆಸಿ ತುರ್ತು ಕ್ರಮ ವಹಿಸಲು ತಹಶೀಲ್ದಾರರಿಗೆ ಸೂಚಿಸಲಾಗುವುದು ಎಂದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯ ಕೆ.ಎ. ನಾರಾಯಣ, ಪ್ರಮುಖರಾದ ಹೊಸಮನೆ ಹರೀಶ್, ಶಾರದಾ ಮಣಿಯಾಣಿ, ಕೋಡಿ ಪೊನ್ನಪ್ಪ ಸೇರಿದಂತೆ ಇತರರು ಹಾಜರಿದ್ದರು. ಇದೇ ಸಂದರ್ಭದಲ್ಲಿ ಕರಿಕೆ ಗ್ರಾಮದ ಹದಿಮೂರನೆ ಮೈಲು ನಿವಾಸಿ ಪಕ್ಷದ ಪ್ರಮುಖರಾದ ಎನ್.ಬಿ. ಬಾಲಕೃಷ್ಣ ಎಂಬವರ ಮಗು ಹೃದಯ ಸಂಬAಧಿ ಸಮಸ್ಯೆಯಿಂದ ಶಸ್ತçಚಿಕಿತ್ಸೆಗೆ ಒಳಗಾಗಿದ್ದು, ಅವರ ಮನೆಗೆ ತೆರಳಿ ಮಗುವಿನ ಯೋಗಕ್ಷೇಮ ವಿಚಾರಿಸಿದರು.