ಸಿದ್ದಾಪುರ, ಆ. ೭: ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸಮಾಜ ಕಾರ್ಯ ವಿದ್ಯಾರ್ಥಿ ನಿಯರ ವಿಭಾಗ, ಹಾಕತ್ತೂರು ಗ್ರಾಮ ಪಂಚಾಯಿತಿ ಮತ್ತು ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆ ಹಾಕತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಕತ್ತೂರಿನ ಸರಕಾರಿ ಶಾಲಾ ಆವರಣದಲ್ಲಿ ನಡೆಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸುರೇಶ್ ಶಿಬಿರವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆಯನ್ನು ನಡೆಸಿ ಅಗತ್ಯ ಔಷಧಿಗಳನ್ನು ವಿತರಿಸಲಾಯಿತು.

ಡಾ. ಡೇವಿನ್ ಕರ್ಕಡ, ಡಾ. ವಿಜಯ ಕುಮಾರ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ಶಾಲಾ ಮುಖ್ಯೋಪಾಧ್ಯಾಯ ಟಿ.ಪಿ. ಸ್ವಾಮಿ, ಎಸ್‌ಡಿಎಂಸಿ ಉಪಾಧ್ಯಕ್ಷ ಹಾರಿಸ್, ಹಾಕತ್ತೂರು ಗ್ರಾಮ ಪಂಚಾಯಿತಿ ಸದಸ್ಯ ಯತೀಶ್ ಮತ್ತು ಶಾಲಾ ಶಿಕ್ಷಕರು ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.