ಕೂಡಿಗೆ, ಆ. ೭: ಕುಶಾಲನಗರ ರೋಟರಿ ಸಂಸ್ಥೆ ವತಿಯಿಂದ ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ದಾಸೋಹಕ್ಕಾಗಿ ಉಚಿತ ತಟ್ಟೆ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕುಶಾಲನಗರ ಘಟಕದ ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷ ಸತೀಶ್ ಮಾತನಾಡಿ, ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಸಾಧನೆಯತ್ತ ಮುಖ ಮಾಡಬೇಕು. ಅಡಗಿರುವ ಪ್ರತಿಭೆಯನ್ನು ಹೊರಹಾಕಲು ವೇದಿಕೆಯನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕುಶಾಲನಗರ ರೋಟರಿ ಸಂಸ್ಥೆಯ ಅಧ್ಯಕ್ಷ ಉಲ್ಲಾಸ್ ಕೃಷ್ಣ ಮಾತನಾಡಿ, ವಿದ್ಯಾರ್ಥಿಗಳಿಗೆ ಔಪಚಾರಿಕ ಶಿಕ್ಷಣದ ಜೊತೆಗೆ ನೈತಿಕ ಶಿಕ್ಷಣವು ಅತ್ಯಂತ ಅಗತ್ಯ ಹಾಗಾಗಿ ವಿದ್ಯಾರ್ಥಿಗಳಿಗೆ ನೈತಿಕ ಗುಣಗಳನ್ನು ಬಳಸಿಕೊಳ್ಳುವಂತೆ ಕಿವಿಮಾತನ್ನು ಹೇಳಿದರು.

ನಿಕಟಪೂರ್ವ ಅಧ್ಯಕ್ಷ ರಂಗಸ್ವಾಮಿ, ರೋಟರಿ ಸಂಸ್ಥೆಯ ಲೆಫ್ಟಿನೆಂಟ್ ಗವರ್ನರ್ ನಿಖಿಲ್, ನಿಕಟ ಪೂರ್ವಾಧ್ಯಕ್ಷ ನವೀನ್, ಪ್ರಮುಖರಾದ ಮಹೇಶ್ ನಲ್ವಾಡೆ, ಆದರ್ಶ್, ರಾಣಿ ಉಲ್ಲಾಸ್, ಹೆಬ್ಬಾಲೆ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಹೆಚ್.ಎಲ್. ರಮೇಶ್, ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ನಾಗೇಂದ್ರ, ಪ್ರೌಢಶಾಲೆಯ ಮುಖ್ಯ ಶಿಕ್ಷಕÀ ಬಸವರಾಜ ಶೆಟ್ಟಿ, ಪ್ರಾಂಶುಪಾಲ ಎನ್.ಎನ್. ಧರ್ಮಪ್ಪ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕಿ ಡಿ. ಕವಿತಾ ಸ್ವಾಗತಿಸಿ, ಸಿ.ಡಿ. ಲೋಕೇಶ್ ವಂದಿಸಿ, ಎನ್. ವೆಂಕಟನಾಯಕ್ ಕಾರ್ಯಕ್ರಮ ನಿರೂಪಿಸಿದರು.