ಬಿಜೆಪಿ ಜೊತೆಗಿನ ಮೈತ್ರಿ ಅಂತ್ಯ: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ!
ಪಾಟ್ನಾ, ಆ. ೯: ಬಿಹಾರದಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿಗೆ ಬ್ರೇಕ್ ಬಿದ್ದಿದೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ನಿತೀಶ್ ಕುಮಾರ್ ಎನ್ಡಿಎ ಮೈತ್ರಿಕೂಟದಿಂದ ಹೊರಬಂದಿದ್ದಾರೆ. ಜೆಡಿಯು ಸಂಸದರು ಮತ್ತು ಶಾಸಕರ ಸಭೆಯಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯನ್ನು ಮುರಿದುಕೊಳ್ಳಲು ಪಕ್ಷವು ಸರ್ವಾನುಮತದಿಂದ ನಿರ್ಧಾರಕ್ಕೆ ಬಂದಿದ್ದು ನಂತರ ರಾಜ್ಯಪಾಲರನ್ನು ಭೇಟಿ ಮಾಡಿದ ನಿತೀಶ್ ಕುಮಾರ್ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಇದೇ ವೇಳೆ ತಮಗೆ ೧೬೦ ಶಾಸಕರ ಬೆಂಬಲವಿರುವ ಪತ್ರವನ್ನು ರಾಜ್ಯಪಾಲ ಫಾಗು ಚೌಹಾಣ್ ಅವರಿಗೆ ನೀಡಿದ್ದಾರೆ. ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡಿರುವ ನಿತೀಶ್ ಕುಮಾರ್ ಮತ್ತೊಮ್ಮೆ ಮಹಾಘಟಬಂಧನ್ ಮೂಲಕ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆ. ರಾಜೀನಾಮೆ ಬಳಿಕ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಅವರ ಮನೆಗೆ ತೆರಳಿದ ನಿತೀಶ್ ಕುಮಾರ್ ಅವರು ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಪತ್ನಿ ಅವರನ್ನು ಭೇಟಿ ಮಾಡಿದರು. ಜಿತನ್ ರಾಮ್ ಮಾಂಝಿ ನೇತೃತ್ವದ ಹಿಂದೂಸ್ತಾನಿ ಅವಾಮ್ ಮೋರ್ಚಾ ನಿತೀಶ್ ಕುಮಾರ್ ಮತ್ತು ಮಹಾಘಟಬಂಧನ್ಗೆ ಬೇಷರತ್ ಬೆಂಬಲ ಘೋಷಿಸಿದೆ.
ಪ್ರಧಾನಿ ಮೋದಿ ಆಸ್ತಿ ವಿವರ ಬಹಿರಂಗ
ನವದೆಹಲಿ, ಆ. ೯: ಪ್ರಧಾನಿ ನರೇಂದ್ರ ಮೋದಿ ಅವರ ಆಸ್ತಿ ವಿವರ ಬಹಿರಂಗವಾಗಿದೆ. ಮೋದಿಯವರು ೨.೨೩ ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಅವೆಲ್ಲವೂ ಬಹುತೇಕ ಬ್ಯಾಂಕ್ ಠೇವಣಿಗಳಾಗಿವೆ. ಆದರೆ ಅವರು ಗಾಂಧಿನಗರದ ಒಂದು ತುಂಡು ಭೂಮಿಯಲ್ಲಿ ತಮ್ಮ ಪಾಲನ್ನು ದಾನ ಮಾಡಿರುವುದರಿಂದ ಯಾವುದೇ ಸ್ಥಿರ ಆಸ್ತಿಯನ್ನು ಹೊಂದಿಲ್ಲ ಎಂದು ಅವರು ಇತ್ತೀಚಿನ ಆಸ್ತಿ ವಿವರ ಬಹಿರಂಗಪಡಿಸಿದ್ದಾರೆ. ಅವರು ಯಾವುದೇ ಬಾಂಡ್, ಷೇರು ಅಥವಾ ಮ್ಯೂಚುವಲ್ ಫಂಡ್ಗಳಲ್ಲಿ ಯಾವುದೇ ಹೂಡಿಕೆಯನ್ನು ಹೊಂದಿಲ್ಲ. ಯಾವುದೇ ವಾಹನವನ್ನು ಹೊಂದಿಲ್ಲ. ಆದರೆ ರೂ. ೧.೭೩ ಲಕ್ಷ ಮೌಲ್ಯದ ನಾಲ್ಕು ಚಿನ್ನದ ಉಂಗುರಗಳನ್ನು ಹೊಂದಿದ್ದಾರೆ ಎಂದು ಅವರ ಘೋಷಣೆಯ ಪ್ರಕಾರ ಮಾರ್ಚ್ ೩೧ ರವರೆಗೆ ನವೀಕರಿಸಿರುವ ಆಸ್ತಿ ವಿವರದಲ್ಲಿ ತಿಳಿದುಬಂದಿದೆ. ಪಿಎಂ ಮೋದಿಯವರ ಚರ ಆಸ್ತಿಯು ಒಂದು ವರ್ಷದಲ್ಲಿ ರೂ. ೨೬.೧೩ ಲಕ್ಷ ಹೆಚ್ಚಾಗಿದೆ. ಆದರೆ ಅವರ ಬಳಿ ಮಾರ್ಚ್ ೩೧, ೨೦೨೧ ರಂತೆ ಇದ್ದ ರೂ. ೧.೧ ಕೋಟಿ ಮೌಲ್ಯದ ಸ್ಥಿರ ಆಸ್ತಿಯನ್ನು ಆಗ ಹೊಂದಿಲ್ಲ. ಪ್ರಧಾನ ಮಂತ್ರಿಗಳ ಕಚೇರಿ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾದ ವಿವರಗಳ ಪ್ರಕಾರ ಮಾರ್ಚ್ ೩೧, ೨೦೨೨ ರಂತೆ ಅವರ ಒಟ್ಟು ಆಸ್ತಿ ಮೌಲ್ಯ ರೂ. ೨,೨೩,೮೨,೫೦೪. ಗುಜರಾತ್ ಮುಖ್ಯ ಮಂತ್ರಿಯಾಗಿದ್ದಾಗ ಅಕ್ಟೋಬರ್ ೨೦೦೨ ರಲ್ಲಿ ಮೋದಿ ಅವರು ಜಂಟಿಯಾಗಿ ವಸತಿ ನಿವೇಶನ ಖರೀದಿಸಿದ್ದರು. ಅದರಲ್ಲಿ ಮೂವರು ಪಾಲುದಾರರಿದ್ದರು. ಸರ್ವೆ ಸಂಖ್ಯೆ ೪೦೧/ಎ ನಲ್ಲಿ ಇದ್ದ ಆ ಭೂಮಿಯನ್ನು ದಾನ ಮಾಡಲಾಗಿದೆ. ಹೀಗಾಗಿ ಅದರ ಮೇಲೆ ಮೋದಿ ಅವರ ಮಾಲೀಕತ್ವ ಇಲ್ಲ ಎಂದು ತಿಳಿಸಲಾಗಿದೆ. ಮಾರ್ಚ್ ೩೧, ೨೦೨೨ ರಂತೆ ಪ್ರಧಾನ ಮಂತ್ರಿಯವರ ಕೈಯಲ್ಲಿರುವ ನಗದು ರೂ. ೩೫,೨೫೦ ಮತ್ತು ಅಂಚೆ ಕಚೇರಿಯಲ್ಲಿ ಅವರ ರಾಷ್ಟಿçÃಯ ಉಳಿತಾಯ ಪ್ರಮಾಣ ಪತ್ರಗಳ ಮೊತ್ತ ರೂ. ೯,೦೫,೧೦೫, ರೂ. ೧,೮೯,೩೦೫ ಮೌಲ್ಯದ ಜೀವ ವಿಮಾ ಪಾಲಿಸಿಗಳನ್ನು ಹೊಂದಿದ್ದಾರೆ.
ಅಶ್ವಿನಿ ಪೊನ್ನಪ್ಪಗೆ ರಾಜ್ಯ ಸರ್ಕಾರದಿಂದ ರೂ. ೧೫ ಲಕ್ಷ
ಬೆಂಗಳೂರು, ಆ. ೯: ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿರುವ ಭಾರತೀಯ ಕ್ರೀಡಾಪಟುಗಳಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಭಾರತದ ಕ್ರೀಡಾಪಟುಗಳು ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ೨೨ ಚಿನ್ನ, ೧೬ ಬೆಳ್ಳಿ ಮತ್ತು ೨೩ ಕಂಚಿನ ಪದಕ ಗೆಲ್ಲುವ ಮೂಲಕ ಪದಕಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಬ್ಯಾಡ್ಮಿಂಟನ್ ಮಿಕ್ಸ್ಡ್ ಡಬಲ್ಸ್ನಲ್ಲಿ ಬೆಳ್ಳಿ ಗೆದ್ದ ಕನ್ನಡತಿ ಅಶ್ವಿನಿ ಪೊನ್ನಪ್ಪ ಅವರಿಗೆ ರಾಜ್ಯ ಸರ್ಕಾರದಿಂದ ರೂ. ೧೫ ಲಕ್ಷ ನಗದು ಪುರಸ್ಕಾರವನ್ನು ಸಚಿವ ಡಾ. ನಾರಾಯಣಗೌಡ ಅವರು ಘೋಷಿಸಿದ್ದಾರೆ. ಈಗಾಗಲೇ ಕ್ರಿಕೆಟ್ನಲ್ಲಿ ಬೆಳ್ಳಿ ಪದಕ ವಿಜೇತೆ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ರೂ. ೧೫ ಲಕ್ಷ ಹಾಗೂ ವೇಟ್ ಲಿಫ್ಟಿಂಗ್ನಲ್ಲಿ ಕಂಚು ಗೆದ್ದ ಗುರುರಾಜ ಪೂಜಾರಿಗೆ ರೂ. ೮ ಲಕ್ಷ ನಗದು ಪುರಸ್ಕಾರ ಘೋಷಿಸಲಾಗಿದೆ. ಇವರೆಲ್ಲರಿಗೂ ಶೀಘ್ರದಲ್ಲೇ ಮುಖ್ಯಮಂತ್ರಿಗಳ ಮೂಲಕ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು. ಇದೇ ವೇಳೆ ಅಮೃತ ಕ್ರೀಡಾ ದತ್ತು ಯೋಜನೆಯಲ್ಲಿ ಆಯ್ಕೆಯಾಗಿರುವ ಕ್ರೀಡಾಪಟುಗಳನ್ನು ಸತ್ಕರಿಸಲಾಗುವುದು ಎಂದು ಸಚಿವ ಡಾ. ನಾರಾಯಣಗೌಡ ಅವರು ತಿಳಿಸಿದ್ದಾರೆ. ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ. ಅಮೃತ ಕ್ರೀಡಾ ದತ್ತು ಯೋಜನೆ ಮೂಲಕ ಕರ್ನಾಟಕದ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕರ್ನಾಟಕದ ಇನ್ನೂ ಹೆಚ್ಚಿನ ಕ್ರೀಡಾಪಟುಗಳು ಅಂರ್ರಾಷ್ಟಿçÃಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ಹೆಚ್ಚಿನ ಪದಕಗಳನ್ನು ತಂದು ಕೊಡುವ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯ ಹಾಗೂ ಪ್ರೋತ್ಸಾಹ ನೀಡಲು ನಮ್ಮ ಸರ್ಕಾರ ಸಿದ್ಧವಿದೆ ಎಂದು ಸಚಿವ ಡಾ. ನಾರಾಯಣಗೌಡ ಅವರು ತಿಳಿಸಿದ್ದಾರೆ.
ಜೆಇಇ ಮುಖ್ಯ ಪರೀಕ್ಷೆ: ರಾಜ್ಯದ ಸಾತ್ವಿಕ್ಗೆ ನೂರು ಅಂಕ!
ಬೆAಗಳೂರು, ಆ. ೯: ಜಂಟಿ ಪ್ರವೇಶ ಪರೀಕ್ಷೆ(ಜೆಇಇ)ಯ ಮುಖ್ಯ ಪರೀಕ್ಷೆ-೨೦೨೨ರಲ್ಲಿ ರ್ಯಾಂಕ್ ಪಟ್ಟಿಯಲ್ಲಿ ಬೆಂಗಳೂರಿನ ವಿದ್ಯಾರ್ಥಿ ಮೊದಲ ಸ್ಥಾನ ಪಡೆದಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ೨೩ ವಿದ್ಯಾರ್ಥಿಗಳಲ್ಲಿ ಬೆಂಗಳೂರಿನ ನಾರಾಯಣ ಓಲಿಂಪಿಯಾಡ್ ಶಾಲೆಯ ಬೊಯ ಹರೇನ್ ಸಾತ್ವಿಕ್ ಅವರಿಗೆ ಮೊದಲ ಸ್ಥಾನ ಸಿಕ್ಕಿದೆ. ರಾಷ್ಟಿçÃಯ ಪರೀಕ್ಷಾ ಸಂಸ್ಥೆ ಜೆಇಇ ಮುಖ್ಯ ಪರೀಕ್ಷೆ-೨೦೨೨ರ ಪೇಪರ್ -೧ನ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಈ ಬಾರಿ ದೇಶಾದ್ಯಂತ ೮,೭೨, ೪೩೨ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊAಡಿದ್ದರು. ಬೊಯ ಹರೇನ್ ಸಾತ್ವಿಕ್ ಶೇ. ೧೦೦ ರಷ್ಟು ಫಲಿತಾಂಶ ಗಳಿಸಿ ಅಖಿಲ ಭಾರತ ಮಟ್ಟದಲ್ಲಿ ನಂಬರ್ ೧ ರ್ಯಾಂಕ್ ಗಳಿಸಿದ್ದಾರೆ. ದೇಶದಲ್ಲಿ ಶೇ. ೧೦೦ ರ್ಯಾಂಕ್ ಗಳಿಸಿದ ೨೩ ವಿದ್ಯಾರ್ಥಿಗಳಲ್ಲಿ ಕರ್ನಾಟಕದಿಂದ ಸಾತ್ವಿಕ್ ಮಾತ್ರ ಸ್ಥಾನ ಪಡೆದಿದ್ದಾರೆ. ನಂಬರ್ ೧ ರ್ಯಾಂಕ್ ಪಡೆಯಲು ತಾವು ನಡೆಸಿದ ಅಧ್ಯಯನವನ್ನು ಸಾತ್ವಿಕ್ ಹೀಗೆ ಹೇಳಿಕೊಳ್ಳುತ್ತಾರೆ. ಮುಖ್ಯ ಪರೀಕ್ಷೆಗೆ ಮುನ್ನ ನಾನು ಅಣಕು ಪರೀಕ್ಷೆ ತೆಗೆದುಕೊಂಡೆ. ಇದು ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿದೆ. ಭೌತಶಾಸ್ತç ಮತ್ತು ರಸಾಯನಶಾಸ್ತçದ ಮೇಲೆ ಹೆಚ್ಚಿನ ಗಮನ ಹರಿಸಿದ್ದೆ ಎಂದರು. ಐಐಟಿ ಬಾಂಬೆಯಲ್ಲಿ ಪ್ರವೇಶ ಪಡೆದು ಕಂಪ್ಯೂಟರ್ ಸೈನ್ಸ್ನಲ್ಲಿ ಮುಂದಿನ ಪದವಿ ಗಳಿಸುವ ಕನಸು ಕಂಡಿರುವ ಸಾತ್ವಿಕ್ ಜೆಇಇ ಅಡ್ವಾನ್ಸ್ಡ್ ಪರೀಕ್ಷೆ ಬರೆಯುವ ಯೋಚನೆಯಲ್ಲಿ ಕೂಡ ಇದ್ದಾರೆ. ಭೌತಶಾಸ್ತç, ಗಣಿತಶಾಸ್ತçದಲ್ಲಿ ೧೦೦ಕ್ಕೆ ೧೦೦, ರಸಾಯನಶಾಸ್ತçದಲ್ಲಿ ಶೇ. ೯೮.೯೮ ಅಂಕ ಗಳಿಸಿದ್ದಾರೆ. ದೇಶದಲ್ಲಿ ಶೇ. ೧೦೦ ಅಂಕ ಗಳಿಸಿದ ನಾಲ್ಕು ವರ್ಗದ ವಿದ್ಯಾರ್ಥಿಗಳಲ್ಲಿ ಸಾಥ್ವಿಕ್ ಕೂಡ ಒಬ್ಬರು. ಈ ಮಧ್ಯೆ, ಎನ್ಟಿಎ ಹೊರಡಿಸಿದ ಅಂಕಿಅAಶಗಳ ಪ್ರಕಾರ, ಪವಿತ್ರಾ ಗುಪ್ತಾ ಶೇ. ೯೯.೯೪ ರೊಂದಿಗೆ ಕರ್ನಾಟಕದ ಮಹಿಳಾ ಟಾಪರ್ ಆಗಿದ್ದಾರೆ. ಕರ್ನಾಟಕದ ವಿದ್ಯಾರ್ಥಿ ತನ್ಮಯ್ ಗೆಜಪತಿ ಅವರು ಪರಿಶಿಷ್ಟ ಪಂಗಡದ ವಿಭಾಗದಲ್ಲಿ ಅಖಿಲ ಭಾರತ ಮಟ್ಟದಲ್ಲಿ ಟಾಪರ್ ಆಗಿದ್ದು, ಶೇ. ೯೯.೯೪ ಅಂಕ ಗಳಿಸಿದ್ದಾರೆ. ಇಬ್ಬರು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯಲ್ಲಿ ಟಾಪರ್ಗಳಾದ ನ್ಯಾಷನಲ್ ಪಬ್ಲಿಕ್ ಸ್ಕೂಲ್ನ ಅಪೂರ್ವ್ ಟಂಡನ್ ಮತ್ತು ನಾರಾಯಣ ಇ-ಟೆಕ್ನೋ ಸ್ಕೂಲ್ನ ಶಿಶಿರ್ ಆರ್ಕೆ ಅವರು ಅಗ್ರ ೧೦೦ ರ್ಯಾಂಕಿAಗ್ನಲ್ಲಿದ್ದಾರೆ, ಶಿಶಿರ್ ಅಖಿಲ ಭಾರತ ಮಟ್ಟದಲ್ಲಿ ೫೬ ಮತ್ತು ಅಪೂರ್ವ್ ೭೧ನೇ ರ್ಯಾಂಕ್ ಗಳಿಸಿದ್ದಾರೆ.