ಸಿದ್ದಾಪುರ, ಆ ೮: ಕುಶಾಲನಗರ ವಲಯದ ಮೀನುಕೊಲ್ಲಿ ಶಾಖೆಯ ವ್ಯಾಪ್ತಿಯ ಅಭ್ಯತ್ಮಂಗಲ, ನೆಲ್ಯಹುದಿಕೇರಿ, ಬೆಟ್ಟದಕಾಡು, ಸಂಪಿಗೆಕೊಲ್ಲಿ, ಕಾಟಿಬಾಣೆ, ಒಂಟಿಯAಗಡಿ, ವಾಲ್ನೂರು ತ್ಯಾಗತ್ತೂರು ಭಾಗಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಮರಳಿ ಕಾಡಿಗೆ ಓಡಿಸುವ ಕಾರ್ಯಾಚರಣೆಯನ್ನು ಆಗಸ್ಟ್ ೧೦ ಮತ್ತು ೧೧ ನೇ ಬುಧವಾರ ಮತ್ತು ಗುರುವಾರ ಹಮ್ಮಿಕೊಳ್ಳಲಾಗಿದೆ. ಆದುದ್ದರಿಂದ ಕಾಫಿ ತೋಟದ ಮಾಲೀಕರು, ಕಾರ್ಮಿಕರು, ಶಾಲಾ ಮಕ್ಕಳು, ವಾಹನ ಸವಾರರು, ಸಾರ್ವಜನಿಕರು ಎಚ್ಚರಿಕೆಯಿಂದ ಇದ್ದು, ಕಾಡಾನೆ ಕಾರ್ಯಾಚರಣೆಯಲ್ಲಿ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಕುಶಾಲನಗರ ವಲಯ ಅರಣ್ಯ ಅಧಿಕಾರಿ ಶಿವರಾಂ ಪ್ರಕಟಣೆಯಲ್ಲಿ ತಿಳಿಸಿದೆ. -ವಾಸು