ಮಡಿಕೇರಿ, ಆ. ೯: ಕರ್ನಾ ಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆ ಸ್ಟೆಪ್ಸ್ ) ವತಿಯಿಂದ ಸರ್ಕಾರದ ನಿರ್ದೇಶನ ದಂತೆ ಕೊಡಗು ಜಿಲ್ಲಾಡಳಿತದ ಸಹಯೋಗದಲ್ಲಿ ಕೊಡಗು ಜಿಲ್ಲೆಯಲ್ಲಿ ನಿರ್ಮಿಸಲುದ್ದೇಶಿಸಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಮಿನಿ ತಾರಾಲಯ ನಿರ್ಮಾಣ ಕಾರ್ಯವನ್ನು ಕೈಗೊಳ್ಳುವ ನಿಟ್ಟಿನಲ್ಲಿ ತಜ್ಞ ವಾಸ್ತುಶಿಲ್ಪಿ ವಿನ್ಯಾಸಕಾರರನ್ನು ಕರೆಸಿ ಕಟ್ಟಡದ ಮಾಸ್ಟರ್ ಪ್ಲಾನ್ ತಯಾರಿಸಿ ಕೊಡಗಿನ ಭೌಗೋಳಿಕ ಪರಿಸರ ಹಾಗೂ ಹವಾಮಾನಕ್ಕೆ ಅನು ಗುಣವಾಗಿ ಕಟ್ಟಡದ ವಿನ್ಯಾಸವನ್ನು ರೂಪಿಸಿ ಸುಸ್ಸಜ್ಜಿತ ವಿಜ್ಞಾನ ಕೇಂದ್ರ ನಿರ್ಮಿಸಲಾಗುವುದು ಎಂದು ಜಿಲ್ಲಾ ವಿಜ್ಞಾನ ಕೇಂದ್ರದ ಸಮಿತಿ ಅಧ್ಯಕ್ಷ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ತಿಳಿಸಿದರು.
ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಮಿನಿ ತಾರಾಲಯ ಸ್ಥಾಪನೆಗೆ ಸಂಬAಧಿಸಿ ದಂತೆ ರೂಪುರೇಷೆಗಳು ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಚರ್ಚಿಸಲು ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ಯೋಜನೆಯಂತೆ ಕೆ ಸ್ಟೆಪ್ಸ್ ವತಿಯಿಂದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ರೂ. ೪ ಕೋಟಿ ಹಾಗೂ ಮಿನಿ ತಾರಾಲಯ ಸ್ಥಾಪನೆಗೆ ರೂ. ೫.೭೫ ಕೋಟಿ ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ.
ಈ ಹಿಂದೆ ಸ್ಟೀವರ್ಟ್ ಹಿಲ್ ಬಳಿ ನಿರ್ಮಿಸಲುದ್ದೇಶಿಸಿದ್ದ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ
(ಮೊದಲ ಪುಟದಿಂದ) ಅಡಿಪಾಯ ಹಾಕಿದ್ದ ಜಾಗದಲ್ಲಿ ಬರೆ ಕುಸಿದ ಕಾರಣ ಇದೀಗ ಹೊಸದಾಗಿ ನಗರದ ಹೊರಭಾಗದ ಕರ್ಣಂಗೇರಿ ಗ್ರಾಮದ ಬಳಿ ವಿಜ್ಞಾನ ಕೇಂದ್ರ ಸ್ಥಾಪಿಸಲು ೩ ಎಕರೆ ಜಾಗವನ್ನು ಈಗಾಗಲೇ ಮಂಜೂರುಗೊಳಿಸಲಾಗಿದೆ ಎಂದು ಅವರು ತಿಳಿಸಿದರು.
ಉದ್ದೇಶಿತ ವಿಜ್ಞಾನ ಕೇಂದ್ರವನ್ನು ಸುಸಜ್ಜಿತವಾಗಿ ನಿರ್ಮಿಸುವ ಮೂಲಕ ಜಿಲ್ಲೆಯ ವಿದ್ಯಾರ್ಥಿಗಳ ವಿಜ್ಞಾನ ಕಲಿಕೆಗೆ ಪೂರಕವಾಗಿ ವಿವಿಧ ವೈಜ್ಞಾನಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಮಿತಿಯ ಎಲ್ಲಾ ಸದಸ್ಯರು ಅಗತ್ಯ ಸಲಹೆಗಳನ್ನು ನೀಡಬೇಕು ಎಂದು ತಿಳಿಸಿದರು.
ವಿಜ್ಞಾನ ಕೇಂದ್ರದಲ್ಲಿ ಹೊರಾಂಗಣದಲ್ಲಿ ಆಟಿಕೆಗಳ ಮೂಲಕ ನಲಿ-ಕಲಿ ಮಾದರಿ ಮತ್ತು ವಿಜ್ಞಾನ ಕಲಿಕೆಯ ಪ್ರಾತ್ಯಕ್ಷಿಕೆಗಳ ನಿರ್ಮಾಣ, ಜೀವ ವೈವಿಧ್ಯತೆಗೆ ಸಂಬAಧಿಸಿದAತೆ ವಿವಿಧ ನಮೂನೆಗಳ ಔಷಧೀಯ ಸಸ್ಯವನ, ಉದ್ಯಾನವನ, ತಡೆಗೋಡೆ (ಕಾಂಪೌAಡ್) ನಿರ್ಮಾಣ ಕಾರ್ಯ, ಕೇಂದ್ರದ ಸುತ್ತ ಹಸಿರು ಬೆಳೆಸುವುದು ಹಾಗೂ ಪರಿಸರ ಸ್ನೇಹಿ ಬೇಲಿ ನಿರ್ಮಾಣ ಕಾರ್ಯಕ್ಕೆ ಮುಂದಾಗುವ ಕುರಿತು ಸಲಹೆ ನೀಡಿದರು.
ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಅಸೋಸಿಯೇಷನ್ ಎಂಬ ಹೆಸರಿನಲ್ಲಿ ನೋಂದಣಿಯಾಗಿರುವ ವಿಜ್ಞಾನ ಕೇಂದ್ರವನ್ನು ಇನ್ನು ಮುಂದೆ ಸಂಘ-ಸAಸ್ಥೆಗಳ ಕಾಯ್ದೆಯಡಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಸೊಸೈಟಿ ಎಂದು ನೋಂದಣಿ ಮಾಡಿಸುವ ಕುರಿತು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಉದ್ದೇಶಿತ ಈ ವಿಜ್ಞಾನ ಕೇಂದ್ರದ ನಿರ್ಮಾಣ ಕಾರ್ಯಕ್ಕೆ ಸಂಬAಧಿಸಿದAತೆ ರಾಜ್ಯದ ವಿವಿಧೆಡೆ ಈಗಾಗಲೇ ನಿರ್ಮಾಣ ಗೊಂಡಿರುವ ಧಾರವಾಡ ಮತ್ತು ಮಂಗಳೂರು ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಚಿಕ್ಕಬಳ್ಳಾ ಪುರ ಜಿಲ್ಲೆಯ ಗೌರಿಬಿದನೂರಿನ ಡಾ. ಹೆಚ್. ನರಸಿಂಹಯ್ಯ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳ ಮಾದರಿ ಹಾಗೂ ವಿನ್ಯಾಸಗಳ ಬಗ್ಗೆ ಸೂಕ್ತ ಮಾಹಿತಿ ಪಡೆದು ಅದೇ ಮಾದರಿಯಲ್ಲಿ ಜಿಲ್ಲೆಯಲ್ಲಿ ಪರಿಸರ ಸ್ನೇಹಿ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಕಾರ್ಯೋನ್ಮುಖ ವಾಗುವಂತೆ ತಿಳಿಸಿದರು.
ಸಭೆಯಲ್ಲಿ ಕೆ ಸ್ಟೆಪ್ಸ್ನ ವೈಜ್ಞಾನಿಕ ಅಧಿಕಾರಿ ಡಾ. ಎಂ.ಎಸ್. ರವಿಕುಮಾರ್ ಅವರು ವಿಜ್ಞಾನ ಕೇಂದ್ರ ಹಾಗೂ ಮಿನಿ ತಾರಾಲಯ ಸ್ಥಾಪನೆಗೆ ಸಂಬAಧಿಸಿದAತೆ ಅಂದಾಜು ವೆಚ್ಚ ಮತ್ತು ಕಾರ್ಯಯೋಜನೆಗಳು ಹಾಗೂ ತಾಂತ್ರಿಕ ಮಾಹಿತಿ ನೀಡಿದರು.
ವಿಜ್ಞಾನ ಕೇಂದ್ರ ಸ್ಥಾಪನೆಗೆ ಸಂಬAಧಿಸಿದAತೆ ಡಿಡಿಪಿಐ ವೇದ ಮೂರ್ತಿ, ವಿಜ್ಞಾನ ಕಾರ್ಯಕ್ರಮಗಳ ಸಂಘಟಕ ಟಿ. ಜಿ.ಪ್ರೇಮಕುಮಾರ್, ವಿಜ್ಞಾನ ಕಾರ್ಯಕರ್ತರಾದ ಸಿ.ಎಸ್. ಸುರೇಶ್, ಜಿ. ಶ್ರೀನಾಥ್ ಅವರು ಮಾಹಿತಿ ನೀಡಿದರು. ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ಮಾಣಕ್ಕೆ ಬೇಕಾದ ಅನುದಾನವನ್ನು ಪಡೆಯಲು ಕೆ-ಸ್ಟೆಪ್ಸ್ಗೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಯಿತು..
ವಿಜ್ಞಾನ ಕೇಂದ್ರದ ಸಮಿತಿಯನ್ನು ಪುನರ್ ರಚಿಸುವ ಮೂಲಕ ಜಿಲ್ಲಾಮಟ್ಟದ ಅಧಿಕಾರಿಗಳು, ವಿಜ್ಞಾನ, ಆರೋಗ್ಯ, ತಾಂತ್ರಿಕ ಹಾಗೂ ಶೈಕ್ಷಣಿಕ ಸಂಸ್ಥೆಗಳನ್ನೊಳಗೊAಡ ಜಿಲ್ಲಾಮಟ್ಟದ ವಿವಿಧ ಇಲಾಖೆ/ಸಂಸ್ಥೆಯ ಮುಖ್ಯಸ್ಥರನ್ನು ಸಮಿತಿಯ ಸದಸ್ಯರಾಗಿ ನೇಮಕ ಮಾಡಿಕೊಳ್ಳುವ ಮೂಲಕ ಸಮಿತಿಯ ಸದಸ್ಯರನ್ನು ವೃದ್ಧಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್ ಪೂರಕ ಮಾಹಿತಿ ನೀಡಿದರು. ಡಿಡಿಪಿಐ ವೇದಮೂರ್ತಿ, ವಿಜ್ಞಾನ ಕಾರ್ಯಕ್ರಮಗಳ ಸಂಘಟಕ ಟಿ.ಜಿ. ಪ್ರೇಮಕುಮಾರ್, ವಿಜ್ಞಾನ ಕಾರ್ಯಕರ್ತರಾದ ಸಿ.ಎಸ್. ಸುರೇಶ್, ಜಿ. ಶ್ರೀನಾಥ್, ಕುಶಾಲನಗರ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನ ಪ್ರಾಂಶುಪಾಲ ಡಾ. ಸೀನಪ್ಪ ಹಾಗೂ ಪೊನ್ನಂಪೇಟೆ ಕೂರ್ಗ್ ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿ ಇಂಜಿನಿಯರಿAಗ್ ಕಾಲೇಜಿನ ಪ್ರಾಂಶುಪಾಲ ಡಾ. ಎಂ. ಬಸವರಾಜಪ್ಪ ಹಾಗೂ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಜಡೇಗೌಡ, ಡಿವೈಎಸ್ಪಿ ಗಜೇಂದ್ರ ಪ್ರಸಾದ್, ಎಫ್‌ಎಂಸಿ ಕಾಲೇಜಿನ ಪ್ರಾಂಶುಪಾಲ ಡಾ. ಜಗತ್ ತಿಮ್ಮಯ್ಯ, ರಸಾಯನಶಾಸ್ತç ವಿಭಾಗದ ಮುಖ್ಯಸ್ಥ ಡಾ. ಜೆ.ಜಿ. ಮಂಜುನಾಥ್ ವಿಜ್ಞಾನ ಕೇಂದ್ರದ ಸ್ಥಾಪನೆ ಕುರಿತು ಅಭಿಪ್ರಾಯ ಮಂಡಿಸಿದರು.
ಉಪ ಪರಿಸರ ಅಧಿಕಾರಿ ಡಾ. ಸಬಿನ ನೂಬಿಯ, ತೋಟಗಾರಿಕ ಇಲಾಖೆಯ ಉಪ ನಿರ್ದೇಶಕ ಸಿ.ಎಂ. ಪ್ರಮೋದ್, ಎಸಿಎಫ್ ಮೊಹಸಿನ್ ಬಾಷಾ, ವಿವಿಧ ಇಲಾಖೆಯ ಪ್ರಮುಖರಾದ ಡಾ. ನಂಜುAಡಯ್ಯ, ಸಿ.ಎನ್. ರಘು, ಎ.ಜಿ. ತಿಮ್ಮಯ್ಯ, ಸತೀಶ್, ಎಂ. ಕೃಷ್ಣಪ್ಪ ಇತರರು ಇದ್ದರು.
ಪೂರಕ ಚಟುವಟಿಕೆಗಳು: ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸದಸ್ಯ ಕಾರ್ಯದರ್ಶಿ ಡಿಡಿಪಿಐ ವೇದ ಮೂರ್ತಿ ವಿಜ್ಞಾನ ಕಾರ್ಯಕ್ರಮಗಳ ಸಂಘಟಕ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋ ಪಾಧ್ಯಾಯ ಟಿ.ಜಿ. ಪ್ರೇಮಕುಮಾರ್, ಬಲ್ಲಮಾವಟಿ ನೇತಾಜಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸಿ.ಎಸ್. ಸುರೇಶ್ ಹಾಗೂ ಕುಶಾಲನಗರ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನ ವಿಜ್ಞಾನ ಶಿಕ್ಷಕ ಜಿ. ಶ್ರೀನಾಥ್ ಅವರು ವಿಜ್ಞಾನ ಕೇಂದ್ರದ ಚಟುವಟಿಕೆಗಳು ಹಾಗೂ ಕಾರ್ಯ ಕ್ರಮಗಳ ಸಂಘಟನೆಗೆ ಸಹಕರಿಸುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.
ಉದ್ದೇಶಿತ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪೂರಕ ವಿಜ್ಞಾನ ಚಟುವಟಿಕೆಗಳು, ಪ್ರಾತ್ಯಕ್ಷಿಕೆಗಳು, ವಿಜ್ಞಾನ ಉಪನ್ಯಾಸ, ವಸ್ತು ಪ್ರದರ್ಶನ, ರಸಪ್ರಶ್ನೆ, ಖಗೋಳ ವಿಜ್ಞಾನ ಹಾಗೂ ಮಕ್ಕಳ ವಿಜ್ಞಾನ ಸಮ್ಮೇಳನ ಸೇರಿದಂತೆ ವಿವಿಧ ವಿಜ್ಞಾನ ಚಟುವಟಿಕೆಗಳನ್ನು ಸಂಘಟಿಸುವುದು ಹಾಗೂ ವಿಜ್ಞಾನ ಆಸಕ್ತರಿಗೆ ಪೂರಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಕುರಿತು ನಿರ್ಣಯಿಸಲಾಯಿತು.