ಮಡಿಕೇರಿ, ಆ. ೮ : ಪ್ರಕೃತಿ ವಿಕೋಪದ ಜಾಗದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರಿಸುವ ಸಂತ್ರಸ್ತರೊAದಿಗೆ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಸಮಾಲೋಚನೆ ನಡೆಸಿ ಧೈರ್ಯ ತುಂಬಿದರು.

ನಗರದ ರೆಡ್ ಕ್ರಾಸ್ ಭವನದಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದ ಸಚಿವರು ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ಪಡೆದುಕೊಂಡರು. ಸಂತ್ರಸ್ತರಿಗೆ ಅಗತ್ಯ ಸೌಲಭ್ಯ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಸೂಕ್ಷ್ಮ ಪ್ರದೇಶಗಳಲ್ಲಿ ವಾಸಿಸುತ್ತಿರುವ ವರನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮನವೊಲಿಸಲು ಪ್ರಯತ್ನಿಸುತ್ತಿದೆ. ಕಾಳಜಿ ಕೇಂದ್ರಗಳಲ್ಲಿ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಸಂತ್ರಸ್ತರಿಗೆ ಬೇಕಾದ ಊಟದ ವ್ಯವಸ್ಥೆ ಮಾಡಲಾಗಿದೆ. ಜೀವಹಾನಿ ತಪ್ಪಿಸಲು ಸ್ಥಳಾಂತರ ಒಂದೇ ಮುಂಜಾಗ್ರತಾ ಕ್ರಮವಾಗಿದ್ದು, ಜಿಲ್ಲೆಯ ೭ ಕಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.

ಮಕ್ಕಳೊAದಿಗೆ ಮಾತುಕತೆ: ಕೇಂದ್ರದಲ್ಲಿರುವ ಮಕ್ಕಳೊಂದಿಗೆ ಸಚಿವ ನಾಗೇಶ್ ಅವರು ಮಾತುಕತೆ ನಡೆಸುವುದರ ಜೊತೆಗೆ ಕೇಕ್ ಕತ್ತರಿಸಿ ಮಕ್ಕಳ ಸಂಭ್ರಮದಲ್ಲಿ ಪಾಲುದಾರರಾದರು.

‘ನಿಮಗೆ ಏನು ಬೇಕು ಮಕ್ಕಳೇ' ಎಂದು ಪ್ರಶ್ನಿಸಿದರು. ಈ ಸಂದರ್ಭ ಜಿಲ್ಲಾಧಿಕಾರಿ ಮಾತನಾಡಿ, ಬೆಳಿಗ್ಗೆ ತಾನು ಬಂದ ಸಂದರ್ಭ ನೂಡೆಲ್ಸ್ ಹಾಗೂ ಕೇಕ್ ನೀಡುವಂತೆ ಕೇಳಿದ್ರು, ಅದನ್ನು ನೀಡಿದ್ದೇವೆ ಎಂದು ತಿಳಿಸಿದರು. ಆ ಬಳಿಕ ಮಕ್ಕಳಿಗೆ ಬಟ್ಟೆ ವಿತರಿಸಿದರು.

ಈ ಸಂದರ್ಭ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲಚೀರ ಎ. ಅಯ್ಯಪ್ಪ, ಉಪವಿಭಾಗಧಿಕಾರಿ ಯತೀಶ್ ಉಳ್ಳಾಲ್, ತಹಶೀಲ್ದಾರ್ ಎಸ್. ಮಹೇಶ್, ರೆಡ್ ಕ್ರಾಸ್ ಸಭಾಪತಿ ರವೀಂದ್ರ ರೈ ಹಾಜರಿದ್ದರು.