೪೦ ದಿನಗಳ ನಂತರ ಏಕನಾಥ್ ಶಿಂಧೆ ಸಂಪುಟ ವಿಸ್ತರಣೆ
ಮುಂಬೈ, ಆ. ೮: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಬರೋಬ್ಬರಿ ೪೦ ದಿನಗಳ ನಂತರ ಆಗಸ್ಟ್ ೯ ರಂದು ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಲಿದ್ದಾರೆ ಎಂದು ಮುಖ್ಯಮಂತ್ರಿಯ ಆಪ್ತರು ಸೋಮವಾರ ತಿಳಿಸಿದ್ದಾರೆ. ಜೂನ್ ೩೦ ರಂದು ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಹಾಗೂ ಉಪಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರು ಅವರು ಪ್ರಮಾಣ ವಚನ ಸ್ವೀಕರಿಸಿದ್ದರು. ಅಂದಿನಿAದ ಸಿಎಂ, ಡಿಸಿಎಂ ಇಬ್ಬರೇ ಸರ್ಕಾರ ನಡೆಸುತ್ತಿದ್ದಾರೆ. ನಾಳೆ ಮಧ್ಯಾಹ್ನ ೧೨ ಗಂಟೆಗೆ ರಾಜಭವನದಲ್ಲಿ ಸಚಿವ ಸಂಪುಟ ವಿಸ್ತರಣೆ ಸಮಾರಂಭ ನಡೆಯಲಿದ್ದು, ಹನ್ನೆರಡು ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಶಿಂಧೆ ಅವರ ಆಪ್ತರು ತಿಳಿಸಿದ್ದಾರೆ. ನಂತರ ಮತ್ತೊಂದು ಸುತ್ತಿನ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಗಣೇಶೋತ್ಸವ ನಿರ್ಬಂಧ ರದ್ದು: ಕಂದಾಯ ಸಚಿವ ಆರ್ ಅಶೋಕ್
ಬೆಂಗಳೂರು, ಆ. ೮: ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಂಬAಧಿಸಿದAತೆ ಕೋವಿಡ್ ಸಮಯದಲ್ಲಿದ್ದ ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವರು, ಗಣೇಶೋತ್ಸವ ಆಚರಣೆಗೆ ಯಾವುದೇ ಇತಿ ಮಿತಿಯಾಗಲೀ, ನಿರ್ಬಂಧವಾಗಲೀ ಇರುವುದಿಲ್ಲ. ಬೆಂಗಳೂರು ನಗರದಲ್ಲಿ ವಾರ್ಡ್ಗೆ ಒಂದು ಗಣೇಶ ಕೂರಿಸಬೇಕು ಎಂಬ ಮಹಾನಗರ ಪಾಲಿಕೆ ನಿಯಮಗಳ ಬಗ್ಗೆ ಸ್ಪಷ್ಟನೆ ನೀಡಿ, ಈ ಹಿಂದೆ ಕೋವಿಡ್ ಇದ್ದ ಕಾರಣ ಗಣೇಶೋತ್ಸವ ಆಚರಣೆಗೆ ಮಿತಿ ಹೇರಲಾಗಿತ್ತು. ಈಗ ಆ ರೀತಿಯ ಯಾವುದೇ ನಿಯಮಗಳು ಇಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳೊAದಿಗೆ ಚರ್ಚಿಸಿದ್ದೇನೆ ಎಂದರು. ಈ ಬಾರಿ ಸಾರ್ವಜನಿಕ ಗಣೇಶೋತ್ಸವವನ್ನು ಕೋವಿಡ್ ಪೂರ್ವದಲ್ಲಿ ಯಾವ ರೀತಿ ಬೀದಿಗಳಲ್ಲಿ ಆಚರಿಸುತ್ತಿದ್ದರೋ ಆ ರೀತಿ ಆಚರಿಸಬಹುದು. ರಸ್ತೆಗೊಂದು, ವಾರ್ಡ್ಗೊಂದು, ಬೀದಿಗೊಂದು ಎಂಬ ನಿಯಮಗಳು ಇರುವುದಿಲ್ಲ ಎಂದರು. ಗಣೇಶೋತ್ಸವ ಸಂದರ್ಭದಲ್ಲಿ ಪ್ಲಾಸ್ಟಿಕ್ ಮತ್ತು ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶಮೂರ್ತಿ ಕೂರಿಸಲು ಆವಕಾಶವಿಲ್ಲ. ಪರಿಸರ ಪ್ರೇಮಿ ಮಣ್ಣಿನ ಗಣೇಶ ಮೂರ್ತಿಗಳನ್ನು ಕೂರಿಸುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಕ್ರಿಕೆಟರ್ ರಾಜೇಶ್ವರಿ ಗಾಯಕ್ವಾಡ್‌ಗೆ ೧೫ ಲಕ್ಷ ರೂ. ಬಹುಮಾನ
ಬೆಂಗಳೂರು, ಆ. ೮: ಕಾಮನ್‌ವೆಲ್ತ್ ಗೇಮ್ಸ್ನಲ್ಲಿ ಮಹಿಳೆಯರ ಕ್ರಿಕೆಟ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಭಾರತ ತಂಡವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಸೋಮವಾರ ಅಭಿನಂದಿಸಿದ್ದಾರೆ. ಮಹಿಳಾ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದ ಕರ್ನಾಟಕದ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ರಾಜ್ಯ ಸರ್ಕಾರದಿಂದ ೧೫ ಲಕ್ಷ ನಗದು ಬಹುಮಾನ ನೀಡುವುದಾಗಿ ಸಚಿವ ಡಾ.ನಾರಾಯಣಗೌಡ ಅವರು ಘೋಷಿಸಿದ್ದಾರೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಅದ್ಭುತ ಹೋರಾಟವನ್ನು ಪ್ರದರ್ಶಿಸಿದರೂ ಸಣ್ಣ ಅಂತರದಿAದ ಟೀಂ ಇಂಡಿಯಾಕ್ಕೆ ಬಂಗಾರದ ಪದಕ ಕೈತಪ್ಪಿತ್ತು.
ಮಲ್ಲಿಕಾರ್ಜುನ ಖರ್ಗೆಗೆ ಸಮನ್ಸ್ : ಇ.ಡಿ ವಿರುದ್ಧ ಕಾಂಗ್ರೆಸ್ ಕಿಡಿ
ನವದೆಹಲಿ, ಆ. ೮: ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿರುವುದು ಸಂಸತ್ತಿಗೆ ಮತ್ತು ಸಂಸದರಿಗೆ ಮಾಡಿರುವ ಅವಮಾನ ಎಂದಿರುವ ಕಾಂಗ್ರೆಸ್, ಇದು ಮರುಕಳಿಸದಂತೆ ನೋಡಿಕೊಳ್ಳಲು ಉಭಯ ಸದನಗಳ ಅಧ್ಯಕ್ಷರು ಇದು ಸೂಕ್ತ ಸಮಯ ಎಂದು ಸೋಮವಾರ ಹೇಳಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬAಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬAಧಿಸಿದAತೆ ಖರ್ಗೆ ಅವರು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಗುರುವಾರ ಹೇಳಿತ್ತು. ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗ ಇ.ಡಿ ಖರ್ಗೆ ಅವರಿಗೆ ಸಮನ್ಸ್ ನೀಡಿರುವುದು ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಮತ್ತು ಕಾಂಗ್ರೆಸ್‌ಗೆ ಕಿರುಕುಳ ನೀಡುವ ಏಕೈಕ ಉದ್ದೇಶದಿಂದ ಮಾಡಲಾಗಿದೆ. ಯಂಗ್ ಇಂಡಿಯನ್‌ನ ಕಛೇರಿಯಲ್ಲಿ ಇ.ಡಿಯಿಂದ ಹುಡುಕಾಟ ನಡೆಸುವ ಈ ಕಸರತ್ತನ್ನು ವಿರೋಧ ಪಕ್ಷದ ನಾಯಕರ ಅಧಿಕೃತ ವಕೀಲರ ಉಪಸ್ಥಿತಿಯಲ್ಲಿ ಉತ್ತಮವಾಗಿ ನಡೆಸಬಹುದಿತ್ತು' ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.
ಮನೆ ಮೇಲೆ ಬುಲ್ಡೋಜರ್ ಪ್ರಯೋಗ; ಅಕ್ರಮ ಕಟ್ಟಡ ನೆಲಸಮ
ನವದೆಹಲಿ, ಆ. ೮: ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ ಆರೋಪವನ್ನು ಎದುರಿಸುತ್ತಿದ್ದ ಬಿಜೆಪಿಯ ಕಿಸಾನ್ ಮೋರ್ಚಾ ಸದಸ್ಯನೆಂದು ಹೇಳಲಾದ ಶ್ರೀಕಾಂತ್ ತ್ಯಾಗಿ ಅವರ ನಿವಾಸದ ಮೇಲೆ ಬಿಜೆಪಿ ಬುಲ್ಡೋಜರ್ ದಾಳಿ ನಡೆಸಿದೆ. ಈ ವೇಳೆ ಅಕ್ರಮವಾಗಿ ನಿರ್ಮಿಸಲಾದ ಕಟ್ಟಡಗಳನ್ನು ನೆಲಸಮ ಮಾಡಿದೆ. ಪೊಲೀಸ್ ಸಿಬ್ಬಂದಿಯೊAದಿಗೆ ನೋಯ್ಡಾದ ಸೆಕ್ಟರ್ -೯೩ ಬಿ ನಲ್ಲಿರುವ ಗ್ರ‍್ಯಾಂಡ್ ಓಮ್ಯಾಕ್ಸ್ ಸೊಸೈಟಿಯನ್ನು ತಲುಪಿದ ಅಧಿಕಾರಿಗಳು, ಶ್ರೀಕಾಂತ್ ತ್ಯಾಗಿ ಅವರು ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡಗಳನ್ನು ಕೆಡವಿದ್ದಾರೆ. ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ವಿಚಾರಕ್ಕೆ ಸಂಬAಧಪಟ್ಟAತೆ ತ್ಯಾಗಿ ಅವರ ಬೆಂಬಲಿಗರನ್ನು ಪೊಲೀಸರು ಬಂಧಿಸಿದ್ದಾರೆ. ನೋಯ್ಡಾ ಪೊಲೀಸರು ತ್ಯಾಗಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಗ್ರ‍್ಯಾಂಡ್ ಓಮ್ಯಾಕ್ಸ್ ಸೊಸೈಟಿಯಲ್ಲಿ ಬಿಜೆಪಿ ಕಿಸಾನ್ ಮೋರ್ಚಾ ಸದಸ್ಯ ತ್ಯಾಗಿ ಮತ್ತು ಮಹಿಳೆಯ ನಡುವೆ ಜಗಳ ನಡೆದಿತ್ತು. ತ್ಯಾಗಿ ಅವರು ಕೆಲವು ಸಸಿಗಳನ್ನು ನೆಡಲು ಬಯಸಿದ್ದರು. ಆದರೆ, ನಿಯಮಗಳ ಉಲ್ಲಂಘನೆಯನ್ನು ಉಲ್ಲೇಖಿಸಿ ಮಹಿಳೆ ಅದನ್ನು ವಿರೋಧಿಸಿದರು. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿತ್ತು. ಘಟನೆಯ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ತ್ಯಾಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿತ್ತು. ಅದಾದ ಕೆಲವು ದಿನಗಳ ನಂತರ, ತ್ಯಾಗಿ ಅವರ ಬೆಂಬಲಿಗರು ವಸತಿ ಸಂಕೀರ್ಣಕ್ಕೆ ತೆರಳಿ, ಮಹಿಳೆ ವಿರುದ್ಧ ಘೋಷಣೆಗಳನ್ನು ಕೂಗಿದ್ದರು ಮತ್ತು ಮಹಿಳೆಯನ್ನು ನಿಂದಿಸಿದ್ದರು.