ಗೋಣಿಕೊಪ್ಪ ವರದಿ, ಆ. ೯: ಗೋಣಿಕೊಪ್ಪ ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯ ವತಿಯಿಂದ ರಕ್ಷಾ ಬಂಧನ ಹಾಗೂ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ೩ ರಿಂದ ೧೦ ವರ್ಷದೊಳಗಿನ ಮಕ್ಕಳಿಗೆ ರಾಧಾ-ಕೃಷ್ಣ ಛದ್ಮವೇಷ ಸ್ಪರ್ಧೆಯನ್ನು ಸೆಪ್ಟೆಂಬರ್ ೧೪ ರಂದು ಗೋಣಿಕೊಪ್ಪ ಬೈಪಾಸ್ನಲ್ಲಿರುವ ಪ್ರಜಾಪಿತ ಬ್ರಹ್ಮಾಕುಮಾರೀಸ್ ಸಭಾಂಗಣದಲ್ಲಿ ಮಧ್ಯಾಹ್ನ ೩ ಗಂಟೆಗೆ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗೆ ೬೩೬೩೧೩೪೭೯೫, ೯೩೯೮೯೨೭೬೦೭ ಸಂಖ್ಯೆಯನ್ನು ಸಂಪರ್ಕಿಸುವAತೆ ಈಶ್ವರೀಯ ವಿಶ್ವ ವಿದ್ಯಾಲಯ ಪ್ರಕಟಣೆ ತಿಳಿಸಿದೆ.