ಮಡಿಕೇರಿ, ಆ.೮: ಪ್ರಸಕ್ತ (೨೦೨೨-೨೩) ಸಾಲಿನಲ್ಲಿ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲು ಇಲಾಖಾ ವೆಬ್‌ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ ೩೧ ಕೊನೆಯ ದಿನವಾಗಿದೆ. ೨೦೨೨-೨೩ನೇ ಸಾಲಿನ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪ್ರತಿ ಸೆಮಿಸ್ಟರ್‌ನಲ್ಲಿ ಶೇ.೬೦ ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು. ಅರ್ಜಿ ನಮೂನೆ (ದೃಢೀಕರಣ), ವ್ಯಾಸಂಗ ಮಾಡಿದ ಕಾಲೇಜುಗಳಿಂದ ದೃಢೀಕರಿಸಿದ ಅಂಕಪಟ್ಟಿ (ದೃಢೀಕರಣ), ಜಾತಿ ದೃಢೀಕರಣ ಪ್ರಮಾಣ ಪತ್ರ (ದೃಢೀಕರಣ), ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ. (ದೃಢೀಕರಣ), ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ (ದೃಢೀಕರಣ) ಸಲ್ಲಿಸಬೇಕು.

ಅರ್ಜಿಯನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ೦೮೨೭೨-೨೨೫೫೩೧, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ೦೮೨೭೨-೨೨೩೫೫೨, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ- ೦೮೨೭೬-೨೮೧೧೧೫, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ- ೦೮೨೭೪-೨೪೯೪೭೬ ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ತಿಳಿಸಿದ್ದಾರೆ.