ಭಾಗಮಂಡಲ, ಆ. ೯: ರಾಷ್ಟçಮಟ್ಟದಲ್ಲಿ ನೂರು ವರ್ಷ ಪೂರೈಸಿದ ಐದು ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ ಕರ್ನಾಟಕದ ಮೂರು ಕೃಷಿ ಪತ್ತಿನ ಸಹಕಾರ ಸಂಘಗಳು ಪ್ರಶಸ್ತಿಗೆ ಆಯ್ಕೆಯಾಗಿದ್ದು, ಭಾಗಮಂಡಲದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಶಾಂತಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಪ್ರಶಸ್ತಿಗೆ ಭಾಜನವಾಗಿದೆ. ತಾ. ೧೨ರಂದು ನವದೆಹಲಿಯ ವಿಗ್ಯಾನ್ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.