ಮಡಿಕೇರಿ, ಆ. ೧೦: ಮಡಿಕೇರಿ - ಮಂಗಳೂರು ರಾಷ್ಟಿçÃಯ ಹೆದ್ದಾರಿಯ ಕಾಟಕೇರಿ ಜಂಕ್ಷನ್ ಬಸ್ ತಂಗುದಾಣದ ಬಳಿಯಲ್ಲಿ ಆಶಿತ್ ಪಿ. ಮತ್ತು ಸುಭಾಷ್ ಎಂಬವರು ಸರ್ಕಾರದ ಪರವಾನಗಿ ಇಲ್ಲದೆ ಅಕ್ರಮವಾಗಿ ಆನೆಯ ಒಂದು ದಂತವನ್ನು ವಶದಲ್ಲಿಟ್ಟುಕೊಂಡು ಮಾರಾಟ ಮಾಡಲು ಪ್ರಯತ್ನಿಸುತ್ತಿರುವಾಗ ಸಿಐಡಿ ಪೊಲೀಸ್ ಅರಣ್ಯ ಘಟಕದವರು ಪತ್ತೆ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.
ಸಿ.ಐ.ಡಿ. ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ. ಶರತ್‌ಚಂದ್ರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ. ಪೊಲೀಸ್ ಅರಣ್ಯ ಘಟಕದ ಪ್ರಭಾರ ಪೊಲೀಸ್ ಅಧೀಕ್ಷಕ ಶ್ರೀನಿವಾಸ್ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ. ಸಿ.ಯು. ಸವಿ, ಹೆಡ್‌ಕಾನ್ಸ್ಟೇಬಲ್‌ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ, ಮತ್ತು ಕಾನ್ಸ್ಟೇಬಲ್ ಮಂಜುನಾಥ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.