ಮಡಿಕೇರಿ, ಆ. ೯: ದೇಶದಾಧ್ಯಂತ ತಾ. ೧೦ ರಂದು ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದ ಉದ್ಘಾಟನೆಯು ತಾ. ೧೦ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಸಂತ ಜೋಸೆಫರ ಶಾಲೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ವೆಂಕಟೇಶ್ ತಿಳಿಸಿದ್ದಾರೆ. ದೇಶದಾಧ್ಯಂತ ತಾ. ೧೦ ರಂದು ರಾಷ್ಟಿçÃಯ ಜಂತುಹುಳ ನಿವಾರಣಾ ಕಾರ್ಯಕ್ರಮ (ಎನ್‌ಡಿಡಿ) ಹಾಗೂ ತಾ. ೧೭ ರಂದು ಮೋಪ್ ಅಪ್ ಡೇ ಕಾರ್ಯಕ್ರಮ ನಡೆಯುತ್ತಿದ್ದು, ೧-೧೯ ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಆಲ್‌ಬೆಂಡಜೋಲ್- ೪೦೦ ಎಂಜಿ ಮಾತ್ರೆಗಳನ್ನು ನೀಡಲಾಗುತ್ತದೆ.

ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮವನ್ನು ೧೦ ಫೆಬ್ರವರಿ ೨೦೧೫ರಲ್ಲಿ ಪ್ರಾರಂಭ ಮಾಡಲಾಗಿದ್ದು, ಮೊದಲಿಗೆ ೧೧ ರಾಜ್ಯಗಳಲ್ಲಿ ಇದನ್ನು ಜಾರಿಗೆ ತರಲಾಯಿತು. ೨೦೧೮ ಫೆಬ್ರವರಿಯಲ್ಲಿ ಈ ಕಾರ್ಯಕ್ರಮವನ್ನು ೩೪ ರಾಜ್ಯಗಳಿಗೆ ವಿಸ್ತರಣೆ ಮಾಡಲಾಗಿದ್ದು, ಇದೀಗ ೧೪ನೇ ಸುತ್ತಿನ ಕಾರ್ಯಕ್ರಮವಾಗಿರುತ್ತದೆ.

ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮದಲ್ಲಿ ೧-೫ ವರ್ಷದ ಒಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. ೬-೧೯ ವರ್ಷದ ಮಕ್ಕಳಿಗೆ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. ಆಶಾ ಕಾರ್ಯಕರ್ತೆಯರು ೬-೧೯ ವರ್ಷದ ಒಳಗಿನ ಶಾಲೆಯಿಂದ ಹೊರಗುಳಿದ ಫಲಾನುಭವಿಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಅಂಗನವಾಡಿಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ೧-೨ ವರ್ಷದ ಮಕ್ಕಳಿಗೆ ಅರ್ಧ ಆಲ್‌ಬೆಂಡಜೋಲ್ ಮಾತ್ರೆ ಹಾಗೂ ೨-೧೯ ವರ್ಷದ ಮಕ್ಕಳಿಗೆ ಒಂದು ಆಲ್‌ಬೆಂಡಜೋಲ್ ಮಾತ್ರೆಯನ್ನು ನೀಡಬೇಕಾಗಿರುತ್ತದೆ.

ಇಂದು ನಡೆಯುವ ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲೆಯಲ್ಲಿ ೧-೧೯ ವರ್ಷದೊಳಗಿನ ಮಕ್ಕಳ ಗುರಿ ೧,೩೭,೯೮೧ ಹೊಂದಿದ್ದು, ಇದರಲ್ಲಿ ಅಂಗನವಾಡಿ ಮಕ್ಕಳು ೩೨,೧೦೩, ಅಂಗನವಾಡಿಯಿAದ ಹೊರಗುಳಿದ ಮಕ್ಕಳು ೫,೩೨೪, ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯಲ್ಲಿರುವ ಮಕ್ಕಳು ೮೦,೩೨೧ ಹಾಗೂ ಪದವಿ ಪೂರ್ವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ೧೧,೦೪೬ ಹಾಗೂ ಐಟಿಐ ಮತ್ತು ತಾಂತ್ರಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ೧೬೪೬ ಮಕ್ಕಳಿದ್ದಾರೆ.

ಎನ್‌ಡಿಡಿ ಕಾರ್ಯಕ್ರಮಕ್ಕೆ ಅವಶ್ಯಕತೆಯಿರುವ ಆಲ್‌ಬೆಂಡಜೋಲ್ ೪೦೦ ಎಂಜಿ ಮಾತ್ರೆಗಳನ್ನು ಈಗಾಗಲೇ ಎಲ್ಲಾ ಪ್ರಾ.ಆ. ಕೇಂದ್ರಗಳ ಮುಖಾಂತರ ಎಲ್ಲಾ ಶಾಲೆ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡಲಾಗಿರುತ್ತದೆ ಹಾಗೂ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಎಲ್ಲಾ ಶಾಲೆ/ ಕಾಲೇಜು ನೋಡಲ್ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಕಿ.ಮ.ಆ.ಸ ಹಾಗೂ ಆಶಾ ಕಾರ್ಯಕರ್ತೆಯರಿಗೆ ಎನ್‌ಡಿಡಿ ಕಾರ್ಯಕ್ರಮದ ಬಗ್ಗೆ ಅರ್ಧ ದಿನದ ತರಬೇತಿಯನ್ನು ನೀಡಲಾಗಿದೆ. ಕಳೆದ ನವೆಂಬರ್ ಮಾಹೆಯಲ್ಲಿ ೨೦೨೧ ರ ನವೆಂಬರ್ ೨೩ ರಿಂದ ನವೆಂಬರ್ ೨೭ ರವರೆಗೆ ನಡೆದ ಎನ್‌ಡಿಡಿ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯು ೧,೩೬,೮೭೧ ಮಕ್ಕಳ ಗುರಿಯನ್ನು ಹೊಂದಿದ್ದು, ೧,೩೮,೧೧೯ ಮಕ್ಕಳಿಗೆ ಆಲ್‌ಬೆಂಡಜೋಲ್ ಗುಳಿಗೆಯನ್ನು ನೀಡಲಾಗಿದ್ದು, ಶೇ. ೧೦೦.೯೧ ಪ್ರಗತಿಯನ್ನು ಸಾಧಿಸಲಾಗಿದೆ ಎಂದು ಡಿ.ಹೆಚ್.ಓ. ಡಾ. ವೆಂಕಟೇಶ್ ತಿಳಿಸಿದ್ದಾರೆ.