ಕುಶಾಲನಗರ, ಆ. ೧೦: ಕುಶಾಲನಗರ ಗುಂಡೂರಾವ್ ಬಡಾವಣೆಯಲ್ಲಿ ತಾಲೂಕು ಭವನ ಮತ್ತು ಅಂಬೇಡ್ಕರ್ ಭವನ ನಿರ್ಮಾಣ ಹಾಗೂ ಹೌಸಿಂಗ್ ಫಾರ್ ಆಲ್ ಯೋಜನೆಯಡಿಯಲ್ಲಿ ೩೫೪ ಮಂದಿ ಅರ್ಹ ಫಲಾನುಭವಿಗಳಿಗೆ ಮನೆ ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ತಿಳಿಸಿದ್ದಾರೆ.

ಅವರು, ಕುಶಾಲನಗರ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ನಡೆದ ಐಡಿಎಸ್‌ಎಂಟಿ ಸಭೆ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದರು. ಗುಂಡೂರಾವ್ ಬಡಾವಣೆ ಅಭಿವೃದ್ಧಿ ಜೊತೆಗೆ ಉಳಿದ ನಿವೇಶನಗಳನ್ನು ಹರಾಜು ಮೂಲಕ ನೀಡಲಾಗುವುದು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ಬಡಾವಣೆಯಲ್ಲಿ ಜಾತ್ರಾ ಮೈದಾನ ಮತ್ತು ಕ್ರೀಡೆ ಸಂಬAಧಿಸಿದAತೆ ಸ್ಟೇಡಿಯಂ ನಿರ್ಮಾಣ ಮತ್ತು ಈಜುಕೊಳದ ಸೌಲಭ್ಯ ಕಲ್ಪಿಸಲಾಗುವುದು ಎಂದರು.

ಜಿ+೧ ಯೋಜನೆಯಡಿಯಲ್ಲಿ ಮನೆ ನಿರ್ಮಾಣ ಮಾಡಿ ಅರ್ಹ ಫಲಾನುಭವಿಗಳಿಗೆ ನೀಡುವ ಕೆಲಸ ನಡೆಯಲಿದೆ ಎಂದು ಮಾಹಿತಿ ಒದಗಿಸಿದರು.

ಕುಶಾಲನಗರ ಪಟ್ಟಣದಲ್ಲಿ ಖಾಸಗಿ ಬಡಾವಣೆಗಳ ನಿರ್ಮಾಣ ಸಂದರ್ಭ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿದಲ್ಲಿ ಮಾತ್ರ ಅನುಮೋದನೆ ನೀಡಲಾಗುವುದು ಎಂದರು.

ಜಿಲ್ಲೆಯಲ್ಲಿ ಕೆರೆಗಳ ಸರ್ವೆ ನಡೆಯುತ್ತಿದ್ದು, ೩೭ ಕೆರೆಗಳು ಒತ್ತುವರಿಯಾಗಿವೆ. ಒತ್ತುವರಿಯನ್ನು ತೆರವುಗೊಳಿಸಿ ಆವರಣ ಬೇಲಿಯನ್ನು ನಿರ್ಮಿಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಸಭೆಯಲ್ಲಿ ಸಮಿತಿ ಸದಸ್ಯರಾದ ಕುಶಾಲನಗರ ಪ.ಪಂ. ಅಧ್ಯಕ್ಷ ಜಯವರ್ಧನ್, ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್, ಕುಶಾಲನಗರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್, ಯೋಜನಾ ನಿರ್ದೇಶಕ ಬಸಪ್ಪ, ಕಾರ್ಯಪಾಲಕ ಅಭಿಯಂತರ ಶಿವಪ್ರಕಾಶ್, ಪಟ್ಟಣ ಪಂಚಾಯಿತಿ ಇಂಜಿನಿಯರ್ ರಂಗರಾಜನ್ ಇದ್ದರು.