ಮಡಿಕೇರಿ, ಆ. ೧೦: ಮಕ್ಕಳ ರಕ್ತ ಹೀನತೆ ಮತ್ತು ಅಪೌಷ್ಟಿಕತೆಯನ್ನು ತಡೆಯಲು ಆಲ್‌ಬೆಂಡಜೋಲ್ ಮಾತ್ರೆಯನ್ನು ಪಡೆಯುವಂತಾಗಬೇಕು. ಜೊತೆಗೆ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಿದ್ದಲ್ಲಿ ಜಂತುಹುಳು ನಿವಾರಣೆ ಮಾಡಬಹುದು ಎಂದು ಜಿ.ಪಂ. ಸಿಇಓ ಭಂವರ್ ಸಿಂಗ್ ಮೀನಾ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಸಂತ ಜೋಸೆಫರ ಶಾಲೆಯಲ್ಲಿ ನಡೆದ ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಕ್ಕಳಲ್ಲಿ ಜಂತು ಹುಳು ನಿವಾರಣೆ ಮಾಡಲು ಸರ್ಕಾರದಿಂದ ಆಲ್‌ಬೆಂಡಜೋಲ್ ಮಾತ್ರೆ ವಿತರಿಸಲಾಗುತ್ತಿದ್ದು, ಇದನ್ನು ಪಡೆಯುವಂತಾಗಬೇಕು. ಪೌಷ್ಟಿಕ ಆಹಾರ ಪಡೆಯುವುದರ ಜೊತೆಗೆ ಶುಚಿತ್ವಕ್ಕೆ ಪ್ರಥಮ ಆದ್ಯತೆ ನೀಡಬೇಕು. ಕೈಗಳನ್ನು ಸರಿಯಾಗಿ ಸೋಪಿನಿಂದ ತೊಳೆಯಬೇಕು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ವೆಂಕಟೇಶ್ ಮಾತನಾಡಿ, ದೇಶದಾದ್ಯಂತ ಆಗಸ್ಟ್ ೧೦ ರಂದು ರಾಷ್ಟಿçÃಯ ಜಂತುಹುಳ ನಿವಾರಣಾ ಕಾರ್ಯಕ್ರಮ (ಎನ್‌ಡಿಡಿ) ಹಾಗೂ ತಾ. ೧೭ ರಂದು ಮೋಪ್ ಅಪ್ ಡೇ ಕಾರ್ಯಕ್ರಮ ನಡೆಯುತ್ತಿದ್ದು, ೧-೧೯ ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಆಲ್‌ಬೆಂಡಜೋಲ್ ಮಾತ್ರೆ ನೀಡಲಾಗುತ್ತದೆ.

ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮ ಯಶಸ್ವಿಗೊಳಿಸುವಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾರ್ವಜನಿಕ ಶಿಕ್ಷಣ, ಪದವಿಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ, ಸ್ವಚ್ಛ ಭಾರತ್ ಮಿಷನ್, ಪಂಚಾಯತ್ ರಾಜ್, ಮುನ್ಸಿಪಲ್ ಕಾರ್ಪೋರೇಷನ್, ಸ್ಕೌಟ್ಸ್ ಮತ್ತು ಗೈಡ್ಸ್ ಇಲಾಖೆಗಳ ಸಹಭಾಗಿತ್ವ ಅಗತ್ಯವಿದೆ ಎಂದರು.

ಆರ್‌ಸಿಹೆಚ್ ಅಧಿಕಾರಿ ಡಾ. ಗೋಪಿನಾಥ್ ಮಾತನಾಡಿ, ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮದಲ್ಲಿ ೧-೫ ವರ್ಷದ ಒಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. ೬-೧೯ ವರ್ಷದ ಮಕ್ಕಳಿಗೆ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. ಆಶಾ ಕಾರ್ಯಕರ್ತೆಯರು ೬-೧೯ ವರ್ಷದ ಒಳಗಿನ ಶಾಲೆಯಿಂದ ಹೊರಗುಳಿದ ಫಲಾನುಭವಿಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ೧-೨ ವರ್ಷದ ಮಕ್ಕಳಿಗೆ ಅರ್ಧ ಆಲ್‌ಬೆಂಡಜೋಲ್ ಮಾತ್ರೆ ಹಾಗೂ ೨-೧೯ ವರ್ಷದ ಮಕ್ಕಳಿಗೆ ಒಂದು ಆಲ್‌ಬೆಂಡಜೋಲ್ ಮಾತ್ರೆ ನೀಡಬೇಕಿದೆ ಎಂದರು.

ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲೆಯಲ್ಲಿ ೧-೧೯ ವರ್ಷದೊಳಗಿನ ಮಕ್ಕಳ ಗುರಿ ೧,೩೭,೯೮೧ ಹೊಂದಿದ್ದು, ಇದರಲ್ಲಿ ಅಂಗನವಾಡಿ ಮಕ್ಕಳು ೩೨,೧೦೩ ಅಂಗನವಾಡಿಯಿAದ ಹೊರಗುಳಿದ ಮಕ್ಕಳು ೫,೩೨೪, ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯಲ್ಲಿರುವ ಮಕ್ಕಳು ೮೦,೩೨೧ ಹಾಗೂ ಪದವಿ ಪೂರ್ವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ೧೧,೦೪೬ ಹಾಗೂ ಐಟಿಐ ಮತ್ತು ತಾಂತ್ರಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ೧೬೪೬ ಇದ್ದು, ಇವರಿಗೆ ಮಾತ್ರ ವಿತರಿಸಲಾಗುತ್ತದೆ ಎಂದರು.

ಕಳೆದ ನವೆಂಬರ್ ಮಾಹೆಯಲ್ಲಿ ೨೦೨೧ ರ ನವೆಂಬರ್ ೨೩ ರಿಂದ ನವೆಂಬರ್ ೨೭ ರವರೆಗೆ ನಡೆದ ಎನ್‌ಡಿಡಿ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯು ೧,೩೬,೮೭೧ ಮಕ್ಕಳ ಗುರಿಯನ್ನು ಹೊಂದಿದ್ದು, ೧,೩೮,೧೧೯ ಮಕ್ಕಳಿಗೆ ಆಲ್‌ಬೆಂಡಜೋಲ್ ಗುಳಿಗೆಯನ್ನು ನೀಡಲಾಗಿದ್ದು, ಶೇ. ೧೦೦.೯೧ ಪ್ರಗತಿ ಸಾಧಿಸಲಾಗಿದೆ ಎಂದು ಆರ್‌ಸಿಎಚ್ ಅಧಿಕಾರಿ ಡಾ. ಗೋಪಿನಾಥ್ ಮಾಹಿತಿ ನೀಡಿದರು.

ಜಿಲ್ಲಾ ಕುಟುಂಬ ಕಲ್ಯಾಣಧಿಕಾರಿ ಡಾ. ಆನಂದ್, ತಾಲೂಕು ವೈದ್ಯಾಧಿಕಾರಿ ಡಾ. ಚೇತನ್, ಜಿಲ್ಲಾ ಆಯೂಷ್ ಅಧಿಕಾರಿ ಡಾ. ರೇಣುಕಾದೇವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಎನ್. ಮಂಜುನಾಥ್, ಸಂತ ಜೋಸೆಫರ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ರೋಜಾ, ಬಿಸಿಎಂ ವ್ಯವಸ್ಥಾಪಕಿ ಕವಿತಾ ಇತರರು ಇದ್ದರು.