ಎಸಿಬಿ ರದ್ದು, ಲೋಕಾಯುಕ್ತಕ್ಕೆ ಮತ್ತೆ ಪೊಲೀಸ್ ಠಾಣೆ ಸ್ಥಾನಮಾನ

ಬೆಂಗಳೂರು, ಆ. ೧೧: ಮಹತ್ವದ ಬೆಳವಣಿಗೆಯಲ್ಲಿ ಈ ಹಿಂದಿನ ಸರ್ಕಾರ ೨೦೧೬ರಲ್ಲಿ ರಚನೆ ಮಾಡಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದ್ದು, ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ನೀಡಿದೆ. ಎಸಿಬಿಯ ಸಂವಿಧಾನವನ್ನು ಪ್ರಶ್ನಿಸಿ ಬೆಂಗಳೂರಿನ ವಕೀಲ ಚಿದಾನಂದ ಅರಸ್, ವಕೀಲರ ಸಂಘ ಮತ್ತು ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ನ್ಯಾಯಮೂರ್ತಿ ಬಿ. ವೀರಪ್ಪ ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ಪೀಠವು ವಿಚಾರಣೆಗೆ ಅಂಗೀಕರಿಸಿತ್ತು. ಲೋಕಾಯುಕ್ತ ಪೊಲೀಸ್ ಠಾಣೆ ಸ್ಥಾನಮಾನ ರದ್ದು ವಿಚಾರಕ್ಕೆ ಸಂಬAಧಿಸಿ ಎಸಿಬಿ ರಚನೆ ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಂಬAಧ ಇಂದು ತೀರ್ಪು ಪ್ರಕಟಗೊಂಡಿದ್ದು, ಹೈಕೋರ್ಟ್ ಎಸಿಬಿ ರಚನೆ ಆದೇಶ ರದ್ದುಪಡಿಸಿದೆ. ಎಸಿಬಿಗೆ ಪೊಲೀಸ್ ಠಾಣೆ ಸ್ಥಾನಮಾನವನ್ನು ರದ್ದುಪಡಿಸಿ ನ್ಯಾ. ಬಿ. ವೀರಪ್ಪ, ನ್ಯಾ. ಕೆ.ಎಸ್. ಹೇಮಲೇಖಾ ಅವರಿದ್ದ ಪೀಠ ತೀರ್ಪು ನೀಡಿದೆ. ಅಂತೆಯೇ ಎಸಿಬಿಯನ್ನು ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಆದೇಶ ಹೊರಡಿಸಿದೆ. ಇದೇ ವೇಳೆ ಎಸಿಬಿ ತನ್ನ ವ್ಯಾಪ್ತಿಯಲ್ಲಿರುವ ಪ್ರಕರಣಗಳು ಮತ್ತು ಅಧಿಕಾರಿಗಳನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾಯಿಸಲು ಹೈಕೋರ್ಟ್ ನಿರ್ದೇಶನ ನೀಡಿದ್ದು, ಅವರು ಆ ಪ್ರಕರಣಗಳನ್ನು ಮುಂದೆ ಕೈಗೆತ್ತಿಕೊಳ್ಳಬೇಕು ಮತ್ತು ಭ್ರಷ್ಟಾಚಾರ ನಿರ್ಮೂಲನೆಗೆ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸಲು ಆ ಅಧಿಕಾರಿಗಳ ಸೇವೆಯನ್ನು ಬಳಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದೆ. ಅಂತೆಯೇ ಭ್ರಷ್ಟಾಚಾರದಲ್ಲಿ ತೊಡಗಿರುವವರು ಯಾವುದೇ ಕಾರಣಕ್ಕೂ ಪಾರಾಗಬಾರದು. ಹೀಗಾಗಿ ಲೋಕಾಯುಕ್ತ ಪೊಲೀಸರೇ ತನಿಖೆ ಮುಂದುವರಿಸಬೇಕು. ಪ್ರಸ್ತುತ ಎಸಿಬಿ ತನಿಖೆ ಮಾಡುತ್ತಿರುವ ಪ್ರಕರಣಗಳು ಲೋಕಾಯುಕ್ತ ವ್ಯಾಪ್ತಿಯಲ್ಲಿ ತನಿಖೆಯಾಗಬೇಕು ಎಂದು ಸರ್ಕಾರದ ಆದೇಶ ರದ್ದುಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಯಮುನಾ ನದಿಯಲ್ಲಿ ದೋಣಿ ಮುಳುಗಿ ನಾಲ್ವರು ಸಾವು

ಬಂದಾ, ಆ. ೧೧: ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಮಾರ್ಕಾ ಪ್ರದೇಶದಲ್ಲಿ ಯಮುನಾ ನದಿಯಲ್ಲಿ ದೋಣಿ ಮುಳುಗಿ ಕನಿಷ್ಟ ನಾಲ್ವರು ನೀರು ಪಾಲಾಗಿರುವ ದಾರುಣ ಘಟನೆ ಗುರುವಾರ ನಡೆದಿದೆ. ಅಲ್ಲದೆ ಘಟನೆಯಲ್ಲಿ ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೋಟ್ ಮಾರ್ಕಾದಿಂದ ಫತೇಪುರ್ ಜಿಲ್ಲೆಯ ಜರೌಲಿ ಘಾಟ್‌ಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೋಣಿಯಲ್ಲಿ ೩೦ ರಿಂದ ೩೫ ಮಂದಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ಅವರು ತಿಳಿಸಿದ್ದಾರೆ. ಏಳರಿಂದ ಎಂಟು ಮಂದಿ ಸುರಕ್ಷಿತವಾಗಿ ಈಜಿ ದಡ ಸೇರಿದ್ದು, ಇನ್ನೂ ಹಲವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ಇದೆ ಎಂದು ಹೆಚ್ಚುವರಿ ಎಸ್ಪಿ ಲಕ್ಷ್ಮಿ ನಿವಾಸ್ ಮಿಶ್ರಾ ಹೇಳಿದ್ದಾರೆ. ಇದುವರೆಗೆ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ದೋಣಿ ದುರಂತದಲ್ಲಿ ಮೃತರಿಗೆ ಸಂತಾಪ ಸೂಚಿಸಿದ್ದು, ಜಿಲ್ಲಾಡಳಿತ ಅಧಿಕಾರಿಗಳು, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ತಕ್ಷಣ ಸ್ಥಳಕ್ಕೆ ತೆರಳಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ

ಬೆಂಗಳೂರು, ಆ. ೧೧: ವಿವಾದದ ಕೇಂದ್ರ ಬಿಂದುವಾಗಿದ್ದ ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದ ವತಿಯಿಂದಲೇ ಧ್ವಜಾರೋಹಣ ಮಾಡಲಾಗುತ್ತದೆಯೇ ಹೊರತು ಬೇರಾರಿಗೂ ಅವಕಾಶವಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಘೋಷಣೆ ಮಾಡಿದ್ದಾರೆ. ದೇಶದ ಸ್ವಾತಂತ್ರ‍್ಯ ಅಮೃತಮಹೋತ್ಸವಕ್ಕೆ ರಾಜ್ಯ ಸರ್ಕಾರ ವಿವಾದವೊಂದನ್ನು ಸದ್ಯಕ್ಕೆ ಇತ್ಯರ್ಥ ಪಡಿಸಿದ್ದು, ಈ ಸಂಬAಧ, ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ ನಡೆಯಲಿದೆ. ಬೇರೆ ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಕಂದಾಯ ಸಚಿವ ಅಶೋಕ್ ಘೋಷಣೆ ಮಾಡಿದ್ದಾರೆ. ಚಾಮರಾಜಪೇಟೆ ಮೈದಾನದ ಸಂಬAಧ ಕಂದಾಯ ಸಚಿವ ಅಶೋಕ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಚಾಮರಾಜಪೇಟೆ ಮೈದಾನದಲ್ಲಿ ಯಾವ ಸಂಘ-ಸAಸ್ಥೆಗಳಿಗೂ ಧ್ವಜಾರೋಹಣಕ್ಕೆ ಅವಕಾಶವಿಲ್ಲ. ಸ್ಥಳೀಯ ಶಾಸಕ ಜಮೀರ್ ಅಹ್ಮದ್‌ಗೂ ಅವಕಾಶವಿರುವುದಿಲ್ಲ. ಸರ್ಕಾರದಿಂದಲೇ ಧ್ವಜಾರೋಹಣ ಮಾಡಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಅಶೋಕ್ ಸ್ಪಷ್ಟಪಡಿಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿಗಳ ಬಂಧನ

ಮAಗಳೂರು, ಆ. ೧೧: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸರು ಮತ್ತೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಪ್ರಕರಣದ ಪ್ರಮುಖ ಆರೋಪಿಗಳಾದ ಶಿಯಾಬುದ್ದಿನ್ ಅಲಿ, ರಿಯಾಜ್ ಮತ್ತು ಬಶೀರ್ ಎಂಬುವವರನ್ನು ಪೊಲೀಸರು ಬಂದಿಸಿದ್ದು, ಹತ್ಯೆ ಬಳಿಕ ಈ ಮೂವರು ಕೇರಳಕ್ಕೆ ಪರಾರಿಯಾಗಿದ್ದರು. ಕೇರಳದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಗೌಪ್ಯ ಸ್ಥಳದಲ್ಲಿರಿಸಿ ಮೂವರು ಆರೋಪಿಗಳ ತೀವ್ರ ವಿಚಾರಣೆ ನಡೆಸಿದ್ದಾರೆ. ಇದೀಗ ಏಳನೇ ಆರೋಪಿಯಾಗಿ ಅಬ್ದುಲ್ ಕಬೀರ್ ಸಿ.ಎ. (೩೩)ನನ್ನು ಬಂಧಿಸಲಾಗಿದೆ. ನೌಫಾಲ್ ಬೆಳ್ಳಾರೆಯ ಗೌರಿಹೊಳೆ ನಿವಾಸಿ ಮೊಹಮ್ಮದ್ ಮಗನಾಗಿದ್ದಾನೆ. ಹಂತಕರು ಕೊಲೆ ಮಾಡಲು ಅಬೀದ್ ಬಳಿ ಇದ್ದ ಕೇರಳ ರಿಜಿಸ್ಟೆçÃಷನ್ ಬೈಕ್‌ನ್ನು ಬಳಸಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಮುಖ ಆರೋಪಿಗಳ ಬಂಧನವನ್ನು ಎಡಿಜಿಪಿ ಅಲೋಕ್ ಕುಮಾರ್ ಅವರು ಖಚಿತ ಪಡಿಸಿದ್ದು, ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. 'ಗುರುವಾರ ಬೆಳಿಗ್ಗೆ ೮ ಗಂಟೆಗೆ ತಲಪಾಡಿ ಚೆಕ್ ಪೋಸ್ಟ್ ಬಳಿ ಸುಳ್ಯದ ಶಿಯಾಬುದ್ದೀನ್ ಅಲಿ, ಸುಬ್ರಹ್ಮಣ್ಯದ ರಿಯಾಝ್ ಮತ್ತು ಸುಳ್ಯದ ಬಶೀರ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಆದಾಗ್ಯೂ ನಾವು ಪುರಾವೆಗಳನ್ನು ಸಂಗ್ರಹಿಸಿದ ನಂತರ ನಾವು ಈ ಲಿಂಕ್ ಕುರಿತು ಪರಿಶೀಲನೆ ನಡೆಸುತ್ತೇವೆ. ಅಪರಾಧದ ನಂತರ ಅವರು ತಕ್ಷಣವೇ ಕೇರಳಕ್ಕೆ ಪರಾರಿಯಾಗಿದ್ದಾರೆ ಮತ್ತು ಆಗಾಗ ಸ್ಥಳವನ್ನು ಬದಲಾಯಿಸುತ್ತಿದ್ದರು. ಈ ಪ್ರಕರಣದ ಸೂಕ್ತ ತನಿಖೆಯ ನಂತರ ರಾಷ್ಟಿçÃಯ ತನಿಖಾ ಸಂಸ್ಥೆಗೆ ಹಸ್ತಾಂತರಿಸಲಾಗುವುದು ಎಂದರು.