ಮಡಿಕೇರಿ, ಆ. ೧೦: ಬಿಜೆಪಿ ಸರ್ಕಾರ ಸ್ವಾತಂತ್ರö್ಯದ ಅಮೃತ ಮಹೋತ್ಸವದಲ್ಲೂ ರಾಜಕೀಯ ಲಾಭ ಪಡೆಯಲು ಹೊರಟಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷö್ಮಣ್ ಆರೋಪಿಸಿದ್ದಾರೆ.
ಪತ್ರಿಕಾಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ೭೫ನೇ ಸ್ವಾತಂತ್ರೊö್ಯÃತ್ಸವದ ಅಮೃತ ಮಹೋತ್ಸವವನ್ನು ದೇಶದ ಎಲ್ಲಾ ಜನರೂ ಸಂಭ್ರಮದಿAದ ಆಚರಿಸಬೇಕಿದೆ. ಈ ಹಿನ್ನೆಲೆಯಲ್ಲಿ ದೇಶದಾದ್ಯಂತ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಆಗಸ್ಟ್ ೧೫ ರಂದು ಬೆಂಗಳೂರಿನಲ್ಲೂ ಕೆಪಿಸಿಸಿಯಿಂದ ಪಾದಯಾತ್ರೆ ನಡೆಯಲಿದೆ ಎಂದರು.
ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ನ್ಯಾಷನಲ್ ಕಾಲೇಜಿನವರೆಗೆ ಪಾದಯಾತ್ರೆ ನಡೆಯಲಿದ್ದು ಇದಕ್ಕಾಗಿ ಪಕ್ಷದಿಂದ ಆ್ಯಪ್ ಬಿಡುಗಡೆ ಮಾಡಲಾಗಿದೆ. ಈಗಾಗಲೇ ಆ್ಯಪ್ ಮೂಲಕ ೬೦ ಸಾವಿರ ಮಂದಿ ನೋಂದಾಯಿಸಿ ಕೊಂಡಿದ್ದು, ಪಾದಯಾತ್ರೆಯಲ್ಲಿ ಸುಮಾರು ಒಂದೂವರೆ ಲಕ್ಷ ಮಂದಿ ಸೇರುವ ನಿರೀಕ್ಷೆ ಇದೆ ಎಂದರು.
ಭಾರತದ ಸ್ವಾತಂತ್ರö್ಯದಲ್ಲಿ ಬಿಜೆಪಿಯ ಯಾವುದೇ ಪಾತ್ರವಿಲ್ಲ. ಆರ್ಎಸ್ಎಸ್ ತನ್ನ ಕೇಂದ್ರ ಕಚೇರಿಯಲ್ಲೇ ೬೦ ವರ್ಷಗಳ ಕಾಲ ತ್ರಿವರ್ಣ ಧ್ವಜವನ್ನು ಹಾರಿಸಿರಲಿಲ್ಲ. ಈಗ ಸ್ವಾತಂತ್ರö್ಯದ ಅಮೃತ ಮಹೋತ್ಸವವನ್ನು
(ಮೊದಲ ಪುಟದಿಂದ) ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಹರ್ಘರ್ ತಿರಂಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಾವುಟವನ್ನು ಪ್ರತಿಯೊಬ್ಬರೂ ಹಾಕಿಕೊಳ್ಳುವುದು ಅವರ ಹಕ್ಕು. ಅದನ್ನು ಒತ್ತಾಯ ಪೂರ್ವಕವಾಗಿ ಹೇರಬಾರದು ಎಂದ ಲಕ್ಷö್ಮಣ್, ತಿರಂಗ ಕಾರ್ಯಕ್ರಮದ ಮೂಲಕ ಚೀನಾದಿಂದ ಆಮದು ಮಾಡಿಕೊಳ್ಳಲಾಗುವ ಪಾಲಿಸ್ಟರ್ ಧ್ವಜ ಗಳನ್ನು ಮಾರಾಟ ಮಾಡಲಾಗುತ್ತಿದೆ. ಇದರಿಂದ ದೇಶದ ಖಾದಿ ಉದ್ಯಮಕ್ಕೆ ಭಾರೀ ನಷ್ಟವನ್ನು ಕೇಂದ್ರ ಸರ್ಕಾರ ಉಂಟುಮಾಡಿದೆ ಎಂದರು.
ಸುಳ್ಯದ ಪ್ರವೀಣ್ ನೆಟ್ಟಾರು ಹತ್ಯೆ ವಿಚಾರವಾಗಿ ಮಾತನಾಡಿದ ಲಕ್ಷö್ಮಣ್, ಪ್ರವೀಣ್ ಹತ್ಯೆಯನ್ನು ಅವರ ನಿಕಟವರ್ತಿ ಸಂಘಟನೆಯವರೇ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆದಲ್ಲಿ ಘಟನೆಯ ನೈಜಾಂಶ ಹೊರಬೀಳಲಿದೆ. ರಾಜ್ಯದಲ್ಲಿ ಕೋಮು ಸೌಹಾರ್ದ ಕದಡುವ ಮೂಲಕ ರಾಜಕೀಯ ಲಾಭ ಪಡೆಯಲು ಪ್ರವೀಣ್ ಹಾಗೂ ಮತ್ತೊಬ್ಬ ಯುವಕನ ಹತ್ಯೆ ಮಾಡಲಾಗಿದೆ ಎಂದರು.
ಸಿದ್ದರಾಮೋತ್ಸವದ ನಂತರ ರಾಜ್ಯ ರಾಜಕೀಯದಲ್ಲಿ ಹಲವು ಬದಲಾವಣೆಗಳಾಗಿವೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ಇದನ್ನರಿತು ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಕಾಂಗ್ರೆಸ್ ಪಕ್ಷ ಸೇರಲು ಮುಂದಾಗಿದ್ದಾರೆ. ಬಿಜೆಪಿ, ಜೆಡಿಎಸ್ ಪಕ್ಷಗಳಿಂದ ಸುಮಾರು ೨೫ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಪಕ್ಷ ಸೇರಲು ಮುಂದಾಗಿದ್ದಾರೆ. ಅವರಲ್ಲಿ ಬಿಜೆಪಿಯ ೯ ಮತ್ತು ಜೆಡಿಎಸ್ನ ೧೧ ಮಂದಿ ಶಾಸಕರು ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದಾರೆ. ಕಾಂಗ್ರೆಸ್ ಸೇರ್ಪಡೆಗಾಗಿ ಇವರೆಲ್ಲಾ ಅರ್ಜಿ ಸಲ್ಲಿಸಲಿದ್ದು ಯಾರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ ಎಂದರು.
ಕಾAಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಕೊಡಗು ಜಿಲ್ಲೆಯಾದÀ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಡಗಿನಲ್ಲಿ ಕಾಂಗ್ರೆಸ್ನಿAದ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ಮುಂದೂಡಲು ತೀರ್ಮಾನಿಸಲಾಗಿದೆ. ಭಾರೀ ಮಳೆ ಹಿನ್ನೆಲೆ ಕಾಂಗ್ರೆಸ್ ಪಾದಯಾತ್ರೆಯನ್ನು ಮುಂದೂಡಲಾಗಿದ್ದು, ಆಗಸ್ಟ್ ೧೫ ರಿಂದ ೩೦ರ ಒಳಗಾಗಿ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಸಭೆ ನಡೆಸಿ ದಿನಾಂಕದ ಮಾಹಿತಿ ನೀಡಲಾಗುವುದು ಎಂದರು.
ಕಾAಗ್ರೆಸ್ನ ಮಾಜಿ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಮಾತನಾಡಿ, ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಸಾಕಷ್ಟು ನಷ್ಟ ಸಂಭವಿಸುತ್ತಿದೆ. ಜಿಲ್ಲೆಯ ಜನ ತೊಂದರೆಗೆ ಸಿಲುಕಿದ್ದು ಸೂಕ್ತ ಪರಿಹಾರ ನೀಡುವಲ್ಲಿ ಶಾಸಕರುಗಳು ವಿಫಲರಾಗಿದ್ದಾರೆ ಎಂದರು.
ಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ವಕ್ತಾರ ಟಾಟು ಮೊಣ್ಣಪ್ಪ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಟ್ಟಮುಡಿ ಹಂಸ ಉಪಸ್ಥಿತರಿದ್ದರು.