ಕುಶಾಲನಗರ, ಆ. ೧೧: ಕುಶಾಲನಗರ ಸರ್ಕಾರಿ ಇಂಜಿನಿಯರಿAಗ್ ಕಾಲೇಜು ಕಳೆದ ೨೦ ದಿನಗಳಿಂದ ಕಗ್ಗತ್ತಲಲ್ಲಿದ್ದು, ಮಕ್ಕಳ ಭವಿಷ್ಯದ ಜೊತೆ ಸರ್ಕಾರ ಆಟವಾಡುತ್ತಿದೆ ಎಂದರೆ ತಪ್ಪಾಗಲಾರದು. ಕಾಲೇಜಿನ ವಿದ್ಯುತ್ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಕುಶಾಲನಗರ ಸೆಸ್ಕಾಂ ಕಚೇರಿ ಅಧಿಕಾರಿಗಳು ಜುಲೈ ೨೦ರಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ. ರೂ ೩ ಲಕ್ಷಕ್ಕೂ ಮಿಕ್ಕಿದ ಮೊತ್ತದ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಈ ಪರಿಸ್ಥಿತಿ ಸೃಷ್ಟಿಯಾಗಿದೆ.
ಕುಶಾಲನಗರ ಸರಕಾರಿ ಇಂಜಿನಿಯರಿAಗ್ ಕಾಲೇಜಿನಲ್ಲಿ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ,ಪ್ರಸಕ್ತ ಸೆಮಿಸ್ಟರ್ ವಿಭಾಗಗಳ ಪರೀಕ್ಷೆ ಕೂಡ ನಡೆಯುತ್ತಿದೆ. ಶಾಲೆಯ ಮುಖ್ಯಸ್ಥರು ಸೆಸ್ಕಾಂ ಅಧಿಕಾರಿಗಳನ್ನು ಗೋಗರೆದರೂ ಯಾವುದೇ ಪ್ರಯೋಜನವಾಗದೆ ಜಿಲ್ಲಾಧಿಕಾರಿಗಳು ಸೇರಿದಂತೆ ಸೆಸ್ಕಾಂ ಉನ್ನತ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಇದುವರೆಗೆ ಯಾವುದೇ ಸ್ಪಂದನ ದೊರಕಿಲ್ಲ ಎನ್ನಲಾಗಿದೆ. ಕಾಲೇಜಿನಲ್ಲಿ ರಾಜ್ಯಮಟ್ಟದಲ್ಲಿ ಇಂಜಿನಿಯರಿAಗ್ ಕಾಲೇಜುಗಳಲ್ಲಿಯೂ ಪರೀಕ್ಷೆ ನಡೆಯುತ್ತಿದ್ದು ವಿದ್ಯುತ್ ಸಂಪರ್ಕದ ಕೊರತೆಯಿಂದ ಇಲ್ಲಿನ ವಿದ್ಯಾರ್ಥಿಗಳಿಗೆ ಮಾತ್ರ ಪ್ರಾಕ್ಟಿಕಲ್ ತರಗತಿಗಳಿಗೆ ಅನಾನುಕೂಲ ಉಂಟಾಗಿದೆ ಎಂದು ವಿದ್ಯಾರ್ಥಿಗಳ ಪೋಷಕರು ದೂರಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯವನ್ನು ಅರಿತ ಪ್ರಾಂಶುಪಾಲರು ದಿನನಿತ್ಯ ಸಾವಿರಾರು ರೂಪಾಯಿ ಮೌಲ್ಯ ಡಿಸೇಲ್ ಖರೀದಿಸಿ ಜನರೇಟರ್ ಬಳಸುವ ಮೂಲಕ ವಿದ್ಯಾರ್ಥಿಗಳ ಪರೀಕ್ಷೆಗೆ ಹಾಜರಾಗುವಂತೆ ನೋಡಿಕೊಳ್ಳುತ್ತಿರುವುದು ಗಮನಕ್ಕೆ ಬಂದಿದೆ. ಆಜಾದಿಕಾ ಅಮೃತ್ ಮಹೋತ್ಸವ ಸಂಭ್ರಮದ ಕ್ಷಣಗಣನೆ ನಡುವೆ ಇಂತಹ ಸಮಸ್ಯೆಗಳ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ಜನಪ್ರತಿನಿಧಿಗಳು ಉನ್ನತ ವ್ಯಾಸಂಗದ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಚಿಂತಿಸಿ ಕಾಲೇಜಿಗೆ ವಿದ್ಯುತ್ ಸಂಪರ್ಕ ಒದಗಿಸುವ ನಿಟ್ಟಿನಲ್ಲಿ ಕೂಡಲೇ ಕಾಳಜಿ ವಹಿಸಬೇಕಾಗಿದೆ.
-ಚಂದ್ರಮೋಹನ್