ಗೋಣಿಕೊಪ್ಪಲು, ಆ. ೧೧: ಗೋಣಿಕೊಪ್ಪಲುವಿನ ಕಾವೇರಿ ಪೊಮ್ಮಕ್ಕಡ ಕೂಟದಿಂದ ಆಯೋಜಿಸಲಾಗಿದ್ದ ಕಕ್ಕಡ ನಮ್ಮೆಯು ಅರುವತ್ತೋಕ್ಲು ಸಮೀಪದ ಭರಣಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಹಿಳೆಯರು ಮದ್ದು ಸೊಪ್ಪಿನಿಂದ ತಯಾರಿಸಿದ ಘಮಘಮಿಸುವ ಪಾಯಸ, ಮದ್ದ್ಪುಟ್ಟ್ ಗಮನಸೆಳೆದವು.

ಕಾವೇರಿ ಪೊಮ್ಮಕ್ಕಡ ಕೂಟದ ಅಧ್ಯಕ್ಷರಾದ ಕೊಟ್ಟಂಗಡ ವಿಜು ದೇವಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಅವರು, ಮಹಿಳೆಯರು ಸದಾ ಕೆಲಸದ ಒತ್ತಡದಲ್ಲಿರುವು ದರಿಂದ ಇಂತಹ ಕಾರ್ಯಕ್ರಮ ಗಳನ್ನು ಆಯೋಜಿಸುವ ಮೂಲಕ ಮಹಿಳೆಯರ ಒತ್ತಡವನ್ನು ಕಡಿಮೆ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದರು.

ಮಾಜಿ ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅವರು, ಈ ನಾಡಿನ ಸಂಸ್ಕೃತಿ ಉಳಿಯಲು ಮಹಿಳೆಯರ ಕೊಡುಗೆ ಅಪಾರವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮುಂಗಾರಿನ ಸಂದರ್ಭದಲ್ಲಿ ಸಿಗುವ ಹೂವುಗಳಿಂದ ಅಲಂಕಾರ ಸ್ಪರ್ಧೆಯು ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.