ಪೊನ್ನಂಪೇಟೆ, ಆ. ೧೧: ಮಾಯ ಮುಡಿಯ ‘ಐರನ್ ಸೈಟ್ ಶೂಟರ್ಸ್' ತಂಡದ ವತಿಯಿಂದ ಕೈಲ್ ಪೊಳ್ದ್ ಹಬ್ಬದ ಅಂಗವಾಗಿ ತೋಕ್ ನಮ್ಮೆ ಮತ್ತು ತೆಂಗಿನಕಾಯಿಗೆ ಗುಂಡು ಹೊಡೆಯುವ ೩ನೇ ವರ್ಷದ ರಾಜ್ಯ ಮಟ್ಟದ ಸ್ಪರ್ಧೆಯನ್ನು ಆಯೋಜಿಸ ಲಾಗಿದೆ ಎಂದು ಸ್ಪರ್ಧೆಯ ಯೋಜನಾ ನಿರ್ದೇಶಕರೂ ಆಗಿರುವ ಮಾಯಮುಡಿಯ ‘ಐರನ್ ಸೈಟ್ ಶೂಟರ್ಸ್' ತಂಡದ ಮುಖ್ಯಸ್ಥ ಆಪಟ್ಟೀರ ಆರ್. ಅಯ್ಯಪ್ಪ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆಪ್ಟಂಬರ್ ೪ ರಂದು ಆಯೋಜಿಸಲಾಗಿರುವ ಈ ಸ್ಪರ್ಧೆಯು ಗೋಣಿಕೊಪ್ಪಲು ಸಮೀಪದ ಮಾಯಮುಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ. ಈ ಶೂಟಿಂಗ್ ಸ್ಪರ್ಧೆಯಲ್ಲಿ ೦.೨೨ ರೈಫಲ್ ಮತ್ತು ೧೨ನೇ ಬೋರ್ ಕೋವಿಯಲ್ಲಿ ತೆಂಗಿನಕಾಯಿಗೆ ಗುಂಡು ಹೊಡೆಯುವ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

೦.೨೨ ರೈಫಲ್ ವಿಭಾಗದಲ್ಲಿ ೫೦ ಪೊನ್ನಂಪೇಟೆ, ಆ. ೧೧: ಮಾಯ ಮುಡಿಯ ‘ಐರನ್ ಸೈಟ್ ಶೂಟರ್ಸ್' ತಂಡದ ವತಿಯಿಂದ ಕೈಲ್ ಪೊಳ್ದ್ ಹಬ್ಬದ ಅಂಗವಾಗಿ ತೋಕ್ ನಮ್ಮೆ ಮತ್ತು ತೆಂಗಿನಕಾಯಿಗೆ ಗುಂಡು ಹೊಡೆಯುವ ೩ನೇ ವರ್ಷದ ರಾಜ್ಯ ಮಟ್ಟದ ಸ್ಪರ್ಧೆಯನ್ನು ಆಯೋಜಿಸ ಲಾಗಿದೆ ಎಂದು ಸ್ಪರ್ಧೆಯ ಯೋಜನಾ ನಿರ್ದೇಶಕರೂ ಆಗಿರುವ ಮಾಯಮುಡಿಯ ‘ಐರನ್ ಸೈಟ್ ಶೂಟರ್ಸ್' ತಂಡದ ಮುಖ್ಯಸ್ಥ ಆಪಟ್ಟೀರ ಆರ್. ಅಯ್ಯಪ್ಪ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆಪ್ಟಂಬರ್ ೪ ರಂದು ಆಯೋಜಿಸಲಾಗಿರುವ ಈ ಸ್ಪರ್ಧೆಯು ಗೋಣಿಕೊಪ್ಪಲು ಸಮೀಪದ ಮಾಯಮುಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ. ಈ ಶೂಟಿಂಗ್ ಸ್ಪರ್ಧೆಯಲ್ಲಿ ೦.೨೨ ರೈಫಲ್ ಮತ್ತು ೧೨ನೇ ಬೋರ್ ಕೋವಿಯಲ್ಲಿ ತೆಂಗಿನಕಾಯಿಗೆ ಗುಂಡು ಹೊಡೆಯುವ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

೦.೨೨ ರೈಫಲ್ ವಿಭಾಗದಲ್ಲಿ ೫೦ ಕುರಿತು ಹೆಚ್ಚಿನ ಮಾಹಿತಿಗಾಗಿ ೯೬೧೧೮೭೦೮೧೩ ಅನ್ನು ಸಂಪರ್ಕಿಸ ಬಹುದಾಗಿದೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದ ಆಯೋಜನ ಸಮಿತಿ ಪ್ರಮುಖರಾದ ಕಾಳಪಂಡ ಟಿಪ್ಪು ಬಿದ್ದಪ್ಪ ಮಾತನಾಡಿ, ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯು ಕೊಡಗಿನ ಪುರಾತನ ಗ್ರಾಮೀಣ ಕ್ರೀಡೆಯಾಗಿದೆ. ಮಾಹಿತಿ ತಂತ್ರಜ್ಞಾನಗಳ ಆವಿಷ್ಕಾರ ದೊಂದಿಗೆ ಆಧುನಿಕ ಕ್ರೀಡೆಗಳು ಹೆಚ್ಚಾದ ಈ ಕಾಲಘಟ್ಟದಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಪ್ರಾಶಸ್ತö್ಯ ಇಲ್ಲದಾಗಿದೆ. ಇದರಿಂದ ಬಹಳಷ್ಟು ಗ್ರಾಮೀಣ ಕ್ರೀಡೆಗಳು ಜನರಿಂದ ದೂರವಾಗುತ್ತಿದೆ. ಇದನ್ನು ಮನಗಂಡ ಮಾಯಮುಡಿಯ ಕ್ರಿಯಾಶೀಲ ಯುವಕರ ತಂಡವೊAದು ‘ಐರನ್ ಸೈಟ್ ಶೂಟರ್ಸ್' ಎಂಬ ಹೆಸರಿನ ಶೂಟರ್ಸ್ ತಂಡವನ್ನು ಕಳೆದ ೨ ವರ್ಷಗಳ ಹಿಂದೆ ಅಸ್ತಿತ್ವಕ್ಕೆ ತರಲಾಗಿದೆ ಎಂದು ತಿಳಿಸಿದರು. ಈ ಸಂಸ್ಥೆ ವತಿಯಿಂದ ಮುಂದೆ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಮತ್ತು ತೋಕ್ ನಮ್ಮೆ(ಬಂದೂಕು ಉತ್ಸವ)ಗಳನ್ನು ನಿರಂತರವಾಗಿ ಆಯೋಜಿಸುವ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದರು.

ಪ್ರಮುಖರಾದ ಕಾಳಪಂಡ ಸಿ. ಸುಧೀರ್ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಕೈಲ್ ಪೋಳ್ದ್ ಹಬ್ಬದ ಅಂಗವಾಗಿ ಆಯೋಜಿಸಲಾಗಿದ್ದ ಈ ಸ್ಪರ್ಧೆ ನಿರೀಕ್ಷೆಗೂ ಮೀರಿ ಯಶಸ್ವಿ ಯಾಗಿತ್ತು. ಅದೇ ರೀತಿ ಈ ವರ್ಷವೂ ಹೆಚ್ಚಿನ ಸ್ಪರ್ಧಿಗಳನ್ನು ನಿರೀಕ್ಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಮಟ್ಟದ ಸ್ಪರ್ಧೆಯಾಗಿ ಇದನ್ನು ವಿಸ್ತರಿಸಲಾಗಿದೆ. ಕಳೆದ ೨ ವರ್ಷಗಳಿಂದ ನಡೆಯುತ್ತಿರುವ ಈ ಸ್ಪರ್ಧೆ ಇದೀಗ ಹೆಚ್ಚು ಜನಪ್ರಿಯಗೊಳ್ಳುತ್ತಿದೆ ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಆಪಟ್ಟೀರ ಟಾಟು ಮೊಣ್ಣಪ್ಪ, ಕಾಳಪಂಡ ಸಿ. ನರೇಂದ್ರ, ಕೊಂಗAಡ ಪಂಚು ದೇವಯ್ಯ ಉಪಸ್ಥಿತರಿದ್ದರು.