ಸಿದ್ದಾಪುರ, ಆ. ೧೧: ಕಾಫಿ ತೋಟದೊಳಗೆ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಗಾಳಿ-ಮಳೆಗೆ ಮರವೊಂದು ಬಿದ್ದ ಪರಿಣಾಮ ಕಾರ್ಮಿಕನೋರ್ವ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಅಮ್ಮತ್ತಿ ಸಮೀಪದ ಹೊಸಕೋಟೆ ಗ್ರಾಮದಲ್ಲಿ ನಡೆದಿದೆ.
ಗಾಳಿ-ಮಳೆಗೆ ಮಾನವ ಜೀವ ಹಾನಿಯಾಗಿರುವ ಎರಡನೇ ಪ್ರಕರಣ ಇದಾಗಿದೆ. ಈ ಹಿಂದೆ ಶನಿವಾರಸಂತೆಯ ನಿವಾಸಿ ವಸಂತಮ್ಮ ಎಂಬವರು ಗೋಡೆ ಕುಸಿದು ಬಿದ್ದ ಪರಿಣಾಮ ಸಾವನ್ನಪ್ಪಿದ್ದಾರೆ.
ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ವೀರಾಜಪೇಟೆ ತಾಲೂಕು ತಹಶೀಲ್ದಾರ್ ಅರ್ಚನಾ ಭಟ್, ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್, ಗ್ರಾಮ ಲೆಕ್ಕಿಗರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಘಟನೆಯ ವಿಚಾರ ತಿಳಿದು ಪ್ರಕಾಶನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ವೀರಾಜಪೇಟೆ ತಾಲೂಕು ಆಸ್ಪತ್ರೆಯ ಶವಗಾರದಲ್ಲಿ ನಡೆಸಿ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು. ಮೃತ ಪ್ರಕಾಶ್ ಪತ್ನಿ ಹಾಗೂ ಈರ್ವರು ಪುತ್ರಿಯರನ್ನು ಅಗಲಿದ್ದಾರೆ.
-ವಾಸು