ಮಡಿಕೇರಿ ಆ.೧೧: ಭಾರತ ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಹಿನ್ನೆಲೆ ಕೊಡಗು ಜಿಲ್ಲಾ ಪಂಚಾಯತ್ ವತಿಯಿಂದ ಹರ್ ಘರ್ ತಿರಂಗ್ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ನೇತೃತ್ವದಲ್ಲಿ ಗುರುವಾರ ಜಿಲ್ಲಾ ಪಂಚಾಯಿತಿಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ತಿರಂಗಾ ಧ್ವಜವನ್ನು ಪ್ರದರ್ಶಿಸಿದರು. ಸ್ವಾತಂತ್ರೊö್ಯÃತ್ಸವದ ಈ ಅಮೃತ ಮಹೋತ್ಸವ ಸಂದರ್ಭದಲ್ಲಿ ತಾ. ೧೩ ರಿಂದ ೧೫ ರ ವರೆಗೆ ಪ್ರತಿ ಮನೆಯಲ್ಲೂ ತಿರಂಗಾ ಧ್ವಜವನ್ನು ಹಾರಿಸುವಂತೆ ಕೋರಲಾಯಿತು.

ಮಹಿಳಾ ಸ್ವ-ಸಹಾಯ ಸಂಘಗಳಿAದ ಸಿದ್ಧಪಡಿಸಲಾದ ಧ್ವಜಗಳನ್ನು ಜಿ.ಪಂ. ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ದವರು ಖರೀದಿಸಿ ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ರಾಷ್ಟçಧ್ವಜವನ್ನು ಹಾರಿಸುವಂತೆ ಕರೆ ನೀಡಲಾಯಿತು.

ಜಿ.ಪಂ. ಉಪಕಾರ್ಯದರ್ಶಿ ಜಿ.ಧನರಾಜು, ಮುಖ್ಯ ಯೋಜನಾಧಿಕಾರಿ ರಾಜ್ ಗೋಪಾಲ್, ಯೋಜನಾ ನಿರ್ದೇಶಕÀ ಜಗದೀಶ್, ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್ ಇತರರು ಇದ್ದರು.