ಮಡಿಕೇರಿ, ಆ. ೧೧: ಅಮೃತ ಮಹೋತ್ಸವ ಪ್ರಯುಕ್ತ ‘ಹರ್ ಘರ್ ತಿರಂಗ’ ಅಭಿಯಾನವನ್ನು ತಾ. ೧೩ ರಿಂದ ೧೫ ರವರೆಗೆ ಕೊಡಗು ಜಿಲ್ಲೆಯಾದ್ಯಂತ ಸಾರ್ವಜನಿಕರ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.
ಈಗಾಗಲೇ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ೨೮ ಸಾವಿರ ಧ್ವಜಗಳನ್ನು ವಿವಿಧ ಇಲಾಖೆಗಳಿಗೆ ವಿತರಿಸಲಾಗಿದ್ದು, ಜಿ.ಪಂ. ಸ್ವಸಹಾಯ ಗುಂಪುಗಳಿAದ ೫೩ ಸಾವಿರಕ್ಕೂ ಹೆಚ್ಚು ಧ್ವಜಗಳನ್ನು ಗ್ರಾಮೀಣ ಮಟ್ಟದಲ್ಲಿ ವಿತರಿಸಲಾಗಿದೆ. ಅಂಚೆ ಕಚೇರಿಯಿಂದ ೧೩ ಸಾವಿರಕ್ಕೂ ಹೆಚ್ಚು, ಹಾಗೆಯೇ ಶಾಸಕರ ನೇತೃತ್ವದಲ್ಲಿಯೂ ಧ್ವಜ ವಿತರಣೆ ಮಾಡಿದ್ದು, ಒಟ್ಟಾರೆ ಜಿಲ್ಲೆಯ ೧.೪೪ ಲಕ್ಷ ಕುಟುಂಬಗಳಿಗೆ ರಾಷ್ಟçಧ್ವಜವನ್ನು ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ತಿಳಿಸಿದ್ದಾರೆ.’
‘ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜು, ಅಂಗನವಾಡಿ ಸೇರಿದಂತೆ ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ತಾ. ೧೩ ರಿಂದ ೧೫ ರವರೆಗೆ ಪ್ರತಿದಿನ ಬೆಳಿಗ್ಗೆ ೮ ರಿಂದ ಧ್ಜಜಾರೋಹಣ ಮಾಡಿ ಸೂರ್ಯಾಸ್ತದ ವೇಳೆಗೆ ಇಳಿಸಬೇಕಿದೆ. ಜಿಲ್ಲೆಯಾದ್ಯಂತ ಮನೆಗಳಲ್ಲಿ ಮಾತ್ರ ತಾ. ೧೩ ರಂದು ಬೆಳಿಗ್ಗೆ ೮ ಗಂಟೆಗೆ ಧ್ವಜಾರೋಹಣ ಮಾಡಿ ಹಗಲು ರಾತ್ರಿ ನಿರಂತರವಾಗಿ ಧ್ವಜ ಹಾರಿಸಿ ತಾ. ೧೫ರ ಸಂಜೆ ಸೂರ್ಯಾಸ್ತದ ವೇಳೆಗೆ ಇಳಿಸಿ, ಹರ್ ಘರ್ ತಿರಂಗ ಅಭಿಯಾನ ಯಶಸ್ವಿಗೊಳಿಸಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಹಕರಿಸುವಂತೆ ಡಾ. ಬಿ.ಸಿ. ಸತೀಶ ಅವರು ಕೋರಿದ್ದಾರೆ.’
ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಹರ್ ಘರ್ ತಿರಂಗ ಅಭಿಯಾನ ಆರಂಭವಾಗಿದ್ದು, ಜಿಲ್ಲೆಯ ಮಡಿಕೇರಿ ನಗರಸಭೆ, ವೀರಾಜಪೇಟೆ ಪುರಸಭೆ, ಕುಶಾಲನಗರ ಮತ್ತು ಸೋಮವಾರಪೇಟೆ ಪಟ್ಟಣ ಪಂಚಾಯಿತಿಗಳಲ್ಲಿ ಹರ್ ಘರ್ ತಿರಂಗ ಅಭಿಯಾನಕ್ಕೆ ಗುರುವಾರ ಚಾಲನೆ ದೊರೆತಿದೆ.
ಇಂದು ಜಾಥಾ
೭೫ನೇ ಸ್ವಾತಂತ್ರö್ಯ ಅಮೃತ ಮಹೋತ್ಸವದ ದಿನಾಚರಣೆಯ ಪ್ರಯುಕ್ತ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ‘ಹರ್ ಘರ್ ತಿರಂಗ’ ಅಭಿಯಾನ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ ಹಾಗೂ ವಿವಿಧ ಸಂಘ-ಸAಸ್ಥೆಗಳ ವತಿಯಿಂದ ತಾ. ೧೨ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ಹರ್ ಘರ್ ತಿರಂಗ ಜಾಥಾವು ನಗರದಲ್ಲಿ ನಡೆಯಲಿದೆ.
ಈ ಜಾಥಾವು ಮಡಿಕೇರಿಯ ಕೋಟೆ ಆವರಣದಿಂದ ಪ್ರಾರಂಭವಾಗಿ ಸ್ಕಾ÷್ವರ್ಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ ಮೂಲಕ ಇಂದಿರಾ ಗಾಂಧಿ ವೃತ್ತ ತಲುಪಿ ನಂತರ ಸ್ಕಾ÷್ವರ್ಡ್ರನ್ ಲೀಡರ್ ದೇವಯ್ಯ ವೃತ್ತ-ಮಂಗೇರಿರ ಮುತ್ತಣ್ಣ ವೃತ್ತ-ಜನರಲ್ ತಿಮ್ಮಯ್ಯ ವೃತ್ತ ಮತ್ತು ಮಂಗೇರಿರ ಮುತ್ತಣ್ಣ ವೃತ್ತದ ಮುಖಾಂತರ ಕೋಟೆ ಆವರಣಕ್ಕೆ ತಲುಪಲಿದೆ.
ಈ ಜಾಥಾದಲ್ಲಿ ಎಲ್ಲಾ ಸರ್ಕಾರಿ ಇಲಾಖಾ ಅಧಿಕಾರಿ ಮತ್ತು ಸಿಬ್ಬಂದಿಗಳು ರಾಷ್ಟç ಧ್ವಜದೊಂದಿಗೆ ಭಾಗವಹಿಸಲಿದ್ದಾರೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಸರ್ಕಾರೇತರ ಸಂಸ್ಥೆಗಳು ಸಹ ಜಾಥಾದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ತಿಳಿಸಿದ್ದಾರೆ.