ಮಡಿಕೇರಿ, ಆ. ೧೦: ೨೦೨೨-೨೩ನೇ ಸಾಲಿನ ಬಾಲಕಿಯರ ಕ್ರೀಡಾ ನಿಲಯಕ್ಕೆ ಭಾರತೀಯ ಕ್ರೀಡಾ ಪ್ರಾಧಿಕಾರದ (ಸಾಯಿ) ತರಬೇತಿ ಕೇಂದ್ರ ವತಿಯಿಂದ ನಗರದ ಬಾಲಕಿಯರ ಕ್ರೀಡಾ ಹಾಸ್ಟ್ಲ್‌ಗೆ ಪ್ರತಿಭಾವಂತ ಹಾಕಿ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ತಾ. ೧೬ ರಂದು ಬೆಳಿಗ್ಗೆ ೯ ಗಂಟೆಗೆ ನಗರದ ಸಾಯಿ ಹಾಕಿ ಟರ್ಫ್ ಮೈದಾನದಲ್ಲಿ ನಡೆಯಲಿದೆ. ೧೨ ರಿಂದ ೧೮ ವರ್ಷದೊಳಗಿನ ಬಾಲಕಿಯರು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಭಾಗವಹಿಸುವ ಕ್ರೀಡಾಪಟುಗಳು ತಮ್ಮ ವೈಯಕ್ತಿಕ ಕ್ರೀಡಾ ಸಾಮಗ್ರಿಗಳನ್ನು ತರತಕ್ಕದ್ದು. ವೈದ್ಯಕೀಯ ಅರ್ಹತಾ ಪತ್ರ ವೈದ್ಯಾಧಿಕಾರಿಯವರಿಂದ, ಕ್ರೀಡಾ ಸಾಧನೆಯ ಸರ್ಟಿಫಿಕೇಟ್ (ಜಿಲ್ಲಾ, ವಿಭಾಗ, ರಾಜ್ಯ ಹಾಗೂ ಅದಕ್ಕಿಂತ ಮೇಲ್ಪಟ್ಟ ೩ ವರ್ಷದ ಹಿಂದಿನ ಸ್ಪರ್ಧೆಯಲ್ಲಿ ಭಾಗವಹಿಸಿದ್ದು), ಜನ್ಮ ದಿನಾಂಕ ಪ್ರಮಾಣ ಪತ್ರ (ಜನನ ಮರಣ ನೋಂದಣಿ ಅಧಿಕಾರಿಗಳಿಂದ), ಇತ್ತೀಚಿನ ೫ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ವಿಳಾಸ ದೃಢೀಕರಣಗೊಳಿಸಲು ಆಧಾರ್ ಕಾರ್ಡ್ ಈ ದಾಖಲಾತಿಗಳ ಮೂಲ ಪ್ರತಿಯೊಂದಿಗೆ ಒಂದು ಸೆಟ್ ಜೆರಾಕ್ಸ್ ಪ್ರತಿಯನ್ನು ತರಬೇಕು. ಈ ಆಯ್ಕೆ ಪ್ರಕ್ರಿಯೆಯು ಹಿಂದಿನ ೩ ವರ್ಷದ ಹಾಕಿ ಕ್ರೀಡಾ ಸಾಧನೆಯ ಪ್ರಮಾಣ ಪತ್ರ ಹಾಗೂ ಕೆಲವೊಂದು ಸಾಯಿ ನಿಗದಿತ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ತುಟ್ಟಿ ಭತ್ಯೆ ಮತ್ತು ಪ್ರಯಾಣ ದರವನ್ನು ನೀಡಲಾಗುವುದಿಲ್ಲ. ಆಯ್ಕೆಯಾದ ಕ್ರೀಡಾಪಟುಗಳಿಗೆ ವಸತಿ, ಊಟ, ಕ್ರೀಡಾ ಸಾಮಗ್ರಿ, ವೈದ್ಯಕೀಯ ಖರ್ಚು, ಶೈಕ್ಷಣಿಕ ಸೌಲಭ್ಯವನ್ನು ಸಾಯಿ ತರಬೇತಿ ಕೇಂದ್ರದಿAದ ಕೊಡಲಾಗುತ್ತದೆ ಎಂದು ಸಾಯಿ ತರಬೇತಿ ಕೇಂದ್ರದ ಆಡಳಿತಾಧಿಕಾರಿ ಮಿನಿ ಉಣ್ಣಿರಾಜ್ ತಿಳಿಸಿದ್ದಾರೆ.