ಸುಂಟಿಕೊಪ್ಪ, ಆ. ೧೧: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಾಂತಗಿರಿ ಕಾರ್ಯಕ್ಷೇತ್ರದ ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರುಗಳು ಹುಲಿಮಸಣಿಕಮ್ಮ ದೇವಾಲಯ ಆವರಣದ ಸುತ್ತ ಮುತ್ತಲಿನಲ್ಲಿ ಬೆಳೆದಿದ್ದ ಕಾಡು ಗಿಡ ಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಿದರು.
ದೇವಸ್ಥಾನ ಸಮಿತಿಯ ಅಧ್ಯಕ್ಷ ಅಯ್ಯಪ್ಪ ಹಾಗೂ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು.
ಇದೇ ಸಂದರ್ಭ ಧಾರ್ಮಿಕ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮದ ಕರಪತ್ರವನ್ನು ಕೂಡ ಶಿವಮ್ಮ ಬಿಡುಗಡೆಗೊಳಿಸಿದರು.
ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಪುಷ್ಪಾವತಿ, ಸೇವಾ ಪ್ರತಿನಿಧಿಗಳು, ಒಕ್ಕೂಟ ಹಾಗೂ ಸಂಘದ ಪದಾಧಿಕಾರಿಗಳು ಇದ್ದರು.