ಸೋಮವಾರಪೇಟೆ, ಆ. ೧೧: ಪಟ್ಟಣದ ಐತಿಹಾಸಿಕ ಆನೆಕೆರೆ ಭಾರೀ ಮಳೆಗೆ ತುಂಬಿ ಹರಿಯುತ್ತಿದ್ದು, ವಾರ್ಡ್ ೧ರ ಬಸವೇಶ್ವರ ರಸ್ತೆ ನಿವಾಸಿಗಳು ಕೆರೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
ವಾರ್ಡ್ ಸದಸ್ಯ ಬಿ.ಆರ್. ಮೃತ್ಯುಂಜಯ ಅವರ ನೇತೃತ್ವದಲ್ಲಿ ಕೆರೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಾಯಿತು.
ಈ ಸಂದರ್ಭ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ, ತಪೋವನ ಕ್ಷೇತ್ರ ಮನೆಹಳ್ಳಿ ಮಠಾಧೀಶರಾದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ, ಪಟ್ಟಣ ಪಂಚಾಯ್ತಿ ನಾಮನಿರ್ದೇಶನ ಸದಸ್ಯರಾದ ಸೋಮೇಶ್, ವೀರಶೈವ ಸಮಾಜದ ಅಧ್ಯಕ್ಷ ಶಿವಕುಮಾರ್, ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಜಿಲ್ಲಾಧ್ಯಕ್ಷ ಮಲ್ಲೇಶ್, ಮಹಿಳಾ ಘಟಕದ ಅಧ್ಯಕ್ಷೆ ಉಷಾರಾಣಿ, ತಾಲೂಕು ಘಟಕದ ಅಧ್ಯಕ್ಷ ಜಯರಾಜ್, ಪ್ರಮುಖರು ಗಳಾದ ಗಿರೀಶ್, ಆನಂದ್, ಸುಮಾ, ವಿದ್ಯಾ, ನಾಗರಾಜ್, ಚಂದ್ರಕಲಾ, ದಯಾನಂದ್, ಪ್ರಕಾಶ್ ಸೇರಿದಂತೆ ಇತರರು ಹಾಜರಿದ್ದರು.