ಮಡಿಕೇರಿ, ಆ. ೧೦: ಭಾರತದ ೭೫ನೇ ಸ್ವಾತಂತ್ರೊö್ಯÃತ್ಸವದ ಅಂಗವಾಗಿ ಭಾರತೀಯ ಜನತಾ ಪಾರ್ಟಿಯ ಮಡಿಕೇರಿ ನಗರ ಘಟಕದ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ತಾ. ೧೪ ರಂದು ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ‘ಮನೆಮನೆಯಲ್ಲೂ ಸ್ವಾತಂತ್ರö್ಯ ದಿನಾಚರಣೆ’ ಎಂಬ ವಿಷಯವನ್ನು ಆಧರಿಸಿ ನಗರದ ಶ್ರೀ ಚೌಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ಬೆಳಿಗ್ಗೆ ೧೦ ಗಂಟೆಗೆ ಸ್ಪರ್ಧೆ ನಡೆಯಲಿದೆ ಎಂದು ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಬಿ.ಎಂ. ರಾಜೇಶ್ ತಿಳಿಸಿದ್ದಾರೆ. ಸಬ್ ಜೂನಿಯರ್-೧ನೇ ತರಗತಿಯಿಂದ ೪ನೇ ತರಗತಿಯವರೆಗೆ, ಜೂನಿಯರ್-೫ನೇ ತರಗತಿಯಿಂದ ೭ನೇ ತರಗತಿಯವರೆಗೆ, ಸೀನಿಯರ್- ೮ನೇ ತರಗತಿಯಿಂದ ೧೦ನೇ ತರಗತಿಯವರೆಗೆ ಎಂಬ ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ಹಾಗೂ ವಿಜೇತರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ಮೂರು ವಿಭಾಗಗಳಿಗೆ ನೀಡಲಾಗುತ್ತದೆ. ಆಸಕ್ತ ವಿದ್ಯಾರ್ಥಿಗಳು ತಾ. ೧೨ ರಂದು ಸಂಜೆ ೫ ಗಂಟೆಯೊಳಗೆ ತಮ್ಮ ಹೆಸರನ್ನು ತಮ್ಮ ಶಾಲೆಯಲ್ಲಿ ಅಥವಾ ೯೮೪೫೫೪೬೧೮೪, ೯೪೪೮೩೧೨೪೪೪ ಈ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಿ ನೋಂದಾಯಿಸಿಕೊಳ್ಳಬಹುದೆAದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.