ಮಡಿಕೇರಿ, ಆ. ೧೧: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಸ್ಥಳೀಯ ಸಂಸ್ಥೆ ಮಡಿಕೇರಿ ತಾಲೂಕಿನ ವಾರ್ಷಿಕ ಕಾರ್ಯಕ್ರಮ ಯೋಜನೆ ಪುಸ್ತಕ ಬಿಡುಗಡೆ ಮಕ್ಕಂದೂರು ಶಾಲೆಯಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಕನ್ನಿಕಂಡ ಶ್ಯಾಂ ಸುಬ್ಬಯ್ಯ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ, ಸ್ಕೌಟ್ ಮಾಸ್ಟರ್ ಹಾಗೂ ಮಕ್ಕಂದೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸುಕ್ರುದೇವೇಗೌಡ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳು, ಸಿಬ್ಬಂದಿಗಳು, ಜಿಲ್ಲಾ ಸಂಸ್ಥೆಯ ಸಹ ಕಾರ್ಯದರ್ಶಿ ಸರೋಜ, ಜಿಲ್ಲಾ ಸಂಘಟಕಿ ದಮಯಂತಿ, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಎಂ.ಎA. ವಸಂತಿ, ಖಜಾಂಚಿ ರತೀಶ, ಉಪಾಧ್ಯಕ್ಷೆ ನೀಲಮ್ಮ ಹಾಗೂ ತಂಗಮ್ಮ, ಜಂಟಿ ಕಾರ್ಯದರ್ಶಿ ಪ್ರಸನ್ನಕುಮಾರ್, ಗೈಡ್ಸ್ ಕ್ಯಾಪ್ಟನ್ ಹಾಗೂ ಜಿಲ್ಲಾ ಮಾಜಿ ಕಾರ್ಯದರ್ಶಿ ಡೇಸಿ ಸೇರಿದಂತೆ ಇನ್ನಿತರರು ಹಾಜರಿದ್ದರು.