ಮಡಿಕೇರಿ, ಆ. ೧೧: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಪ್ಯಾಕ್ಸ್, ಪಟ್ಟಣ ಮತ್ತು ಪಿಕಾರ್ಡ್ ಬ್ಯಾಂಕ್, ಎ.ಪಿ.ಸಿ.ಎಂ.ಎಸ್., ಪತ್ತಿನ ಹಾಗೂ ಜೇನು ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಜಿ.ಎಸ್.ಟಿ., ಆದಾಯ ತೆರಿಗೆ ಹಾಗೂ ಆರೋಗ್ಯದ ಕುರಿತು ವಿಶೇಷ ಶಿಕ್ಷಣ ಕಾರ್ಯಕ್ರಮ ಏರ್ಪಡಿಸಲಾಗಿದೆ.

ನಗರದ ಪೆನ್‌ಶನ್ ಲೇನ್‌ನಲ್ಲಿರುವ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ತಾ. ೧೨ ರಂದು (ಇಂದು) ಪೂರ್ವಾಹ್ನ ೧೧ ಗಂಟೆಗೆ ಯೂನಿಯನ್ ಅಧ್ಯಕ್ಷ ಎ.ಕೆ. ಮನು ಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಉದ್ಘಾಟನೆಯನ್ನು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಬಿ.ಡಿ. ಮಂಜುನಾಥ್ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಪಿ.ಸಿ. ಮನು ರಾಮಚಂದ್ರ, ನಿರ್ದೇಶಕರಾದ ಎನ್.ಎ. ರವಿ ಬಸಪ್ಪ, ಬಿ.ಎ. ರಮೇಶ್ ಚಂಗಪ್ಪ, ಪಿ.ಸಿ. ಅಚ್ಚಯ್ಯ ಹಾಗೂ ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದು ಯೂನಿಯನ್ ಪ್ರಕಟಣೆ ತಿಳಿಸಿದೆ.