ಸುಂಟಿಕೊಪ್ಪ, ಆ. ೧೧: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಕೂರು-ಶಿರಂಗಾಲ ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರುಗಳು ನಾಕೂರು-ಶಿರಂಗಾಲ ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ಆವರಣದಲ್ಲಿ ಬೆಳೆದಿದ್ದ ಕಾಡು ಗಿಡ ಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಿದರು.
ದೇವಸ್ಥಾನ ಸಮಿತಿಯ ಅಧ್ಯಕ್ಷ ಎಂ.ಡಿ. ಧರ್ಮಪ್ಪ ಹಾಗೂ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ಸತೀಶ್, ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಪುಷ್ಪಾವತಿ, ಸೇವಾ ಪ್ರತಿನಿಧಿ ಯಶೋಧ, ಒಕ್ಕೂಟ ಹಾಗೂ ಸಂಘದ ಪದಾಧಿಕಾರಿಗಳು ಇದ್ದರು.