ಮಡಿಕೇರಿ, ಆ. ೧೨: ಮಂಗಳೂರು ವಿಶ್ವವಿದ್ಯಾನಿಲಯ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಎನ್‌ಇಪಿ ಮೊದಲ ಸೆಮಿಸ್ಟರ್ ತರಗತಿಗಳು ತಾ. ೧೭ ರಿಂದ ಪ್ರಾರಂಭವಾಗಲಿದ್ದು, ಮೂರು ದಿನಗಳ ಕಾಲ ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಗೆ ಅಭಿಶಿಕ್ಷಣ (ಓರಿಯೆಂಟೇಶನ್) ಕಾರ್ಯಕ್ರಮ ನಡೆಯಲಿರುವುದು ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಸಿ. ಜಗತ್ ತಿಮ್ಮಯ್ಯ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.