ಸೋಮವಾರಪೇಟೆ, ಆ.೧೨: ಪಟ್ಟಣದ ಐತಿಹಾಸಿಕ ಆನೆಕೆರೆ ಭರ್ತಿಯಾಗಿರುವ ಹಿನ್ನೆಲೆ ಪಟ್ಟಣ ಪಂಚಾಯಿತಿ ವತಿಯಿಂದ ವಿಶೇಷ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಲಾಯಿತು.
ಪಟ್ಟಣ ಪಂಚಾಯಿತಿಯ ಪ್ರಥಮ ಪ್ರಜೆ, ಪಂಚಾಯಿತಿಯ ಅಧ್ಯಕ್ಷ ಪಿ.ಕೆ. ಚಂದ್ರು ಅವರ ನೇತೃತ್ವದಲ್ಲಿ ಆನೆಕೆರೆಗೆ ಪೂಜೆ ಸಲ್ಲಿಸಿ, ನಾಡಿನ ಸುಭೀಕ್ಷೆಗಾಗಿ ಪ್ರಾರ್ಥಿಸಲಾಯಿತು.
ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷ ಸಂಜೀವ, ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಸದಸ್ಯರುಗಳಾದ ಮೃತ್ಯುಂಜಯ, ಬಿ.ಆರ್. ಮಹೇಶ್, ಶೀಲಾ ಡಿಸೋಜ, ಮೋಹಿನಿ, ಮುಖ್ಯಾಧಿಕಾರಿ ನಾಚಪ್ಪ ಸೇರಿದಂತೆ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.