ಮಡಿಕೇರಿ, ಆ. ೧೨: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉಚಿತವಾಗಿ ಕಂಪ್ಯೂಟರ್ ತರಬೇತಿ ತಾ. ೧೭ ರಿಂದ ನಡೆಯಲಿದೆ. ಈ ತರಬೇತಿಯಲ್ಲಿ ಕಂಪ್ಯೂಟರ್ ಬೇಸಿಕ್ಸ್ ಹಾಗೂ ಕನ್ನಡ ನುಡಿ ವಿಷಯಗಳ ಕುರಿತು ತರಬೇತಿ ನೀಡಲಾಗುವುದು. ಕನಿಷ್ಟ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ ಹಾಗೂ ೧೮-೩೦ ವರ್ಷಗಳ ವಯೋಮಿತಿಯೊಳಗಿರುವ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಬಹುದು. ತರಬೇತಿಯಲ್ಲಿ ಒಟ್ಟು ೨೦ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದೆ.

ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿ ತಮ್ಮ ಹೆಸರನ್ನು ವಿದ್ಯಾರ್ಹತೆಗೆ ಸಂಬAಧಿಸಿದ ಅಂಕಪಟ್ಟಿಗಳು, ಮೀಸಲಾತಿ ಪ್ರಮಾಣಪತ್ರ ಹಾಗೂ ಆಧಾರ ಕಾರ್ಡ್/ ಗುರುತಿನ ಚೀಟಿಯ ಪ್ರತಿಗಳನ್ನು ಹಾಜರುಪಡಿಸಿ ನೋಂದಾಯಿಸಿಕೊಳ್ಳಲು ತಿಳಿಸಿದೆ. ಮೊದಲು ತರಬೇತಿಗೆ ನೋಂದಾಯಿಸಿದ ಅಭ್ಯರ್ಥಿಗಳಿಗೆ ಆಧ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಕಚೇರಿಯ ದೂ. ೦೮೨೭೨-೨೨೫೮೫೧ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಉಮಾ ತಿಳಿಸಿದ್ದಾರೆ.