ಕೂಡಿಗೆ, ಆ. ೧೨: ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟಿçÃಯ ಜಂತುಹುಳು ನಿರ್ವಹಣಾ ಕಾರ್ಯಕ್ರಮ ಮೊರಾರ್ಜಿ ಶಾಲೆಯ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ, ತೇಜಶ್ರೀ ನೆರವೇರಿಸಿ ನಂತರ ಮಾತನಾಡಿ, ವಿದ್ಯಾರ್ಥಿಗಳಿಗೆ ಆಗುವ ಸಮಸ್ಯೆ, ಸ್ವಚ್ಛತೆಯ ಮಹತ್ವ, ನಿರ್ವಹಣೆಯ ಮಾತ್ರೆಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು ನೀಡಿದರು. ತಾಲೂಕು ಆರೋಗ್ಯ ನೀರಿಕ್ಷಣಾಧಿಕಾರಿ ವಿಶ್ವಜ್ಞ ಡೆಂಗ್ಯೂ ಮತ್ತು ಮಲೇರಿಯಾ ರೋಗದ ಬಗ್ಗೆ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮುಖ್ಯೋಪಾಧ್ಯಾಯ ಪ್ರಕಾಶ್ ವಹಿಸಿ ದಿನದ ಮಹತ್ವದ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ದಿನೇಶ್, ನಾಗೇಂದ್ರ, ಚಿದಂಬರ್, ಹರಿಣಾಕ್ಷಿ, ಜಗದೀಶ್, ದೊಡ್ಡಯ್ಯ, ಶುಶ್ರೂಷಕರಾದ ಮೀನಾ ಹಾಗೂ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಹಾಜರಿದ್ದರು.