ಸೋಮವಾರಪೇಟೆ, ಆ. ೧೨: ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ದಿವಸ ಪಟ್ಟಣ ಪಂಚಾಯಿತಿಯಿAದ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಮಾಡುತ್ತಿರುವ ಬಗ್ಗೆ ಅಂಗಡಿಗಳನ್ನು ಪರಿಶೀಲಿಸಲಾಯಿತು.

ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ಹಾಗೂ ಪ್ಲಾಸ್ಟಿಕ್ ಕವರ್‌ಗಳನ್ನು ವಶಪಡಿಸಿಕೊಳ್ಳಲಾಯಿತು. ಸುಮಾರು ೧.೫ ಕೆ.ಜಿ. ಪ್ಲಾಸ್ಟಿಕ್ ವಶಪಡಿಸಿಕೊಂಡು ೩೦೦ ರೂಪಾಯಿಗಳನ್ನು ದಂಡ ವಸೂಲಿಸಲಾಗಿದೆ. ಪ.ಪಂ. ಇಒ ನಾಚಪ್ಪ ಇತರರು ಪಟ್ಟಣ ಸಂಚಾರ ಕೈಗೊಂಡು ಪ್ಲಾಸ್ಟಿಕ್ ಬ್ಯಾಗ್ ಮಾರಾಟ ಮಾಡುವುದನ್ನು ಪತ್ತೆ ಹಚ್ಚಿದರು.