ಸೋಮವಾರಪೇಟೆ, ಆ.೧೨: ಸಮೀಪದ ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಜೂರು-ಐಗೂರು-ಪಾಷಾಣಮೂರ್ತಿ ದೇವಾಲಯ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗಿದ್ದು, ಸಂಚಾರ ದುಸ್ತರವಾಗಿದೆ.
ಕಾಜೂರು ಗ್ರಾಮದ ಬಾಲಕೃಷ್ಣ ಎಂಬವರ ಮನೆಯ ಸಮೀಪ ಮುಖ್ಯರಸ್ತೆಯಲ್ಲಿ ಬೃಹತ್ ಗುಂಡಿಗಳು ನಿರ್ಮಾಣವಾಗಿದ್ದು, ಮಳೆ ನೀರು ಸಂಗ್ರಹಗೊAಡು ಕೆರೆಗಳಂತೆ ಗೋಚರಿಸುತ್ತಿವೆ. ಕಳಪೆ ಕಾಮಗಾರಿಯಿಂದಾಗಿ ನಿರ್ಮಾಣವಾದ ಒಂದು ವರ್ಷದಲ್ಲೇ ರಸ್ತೆ ಗುಂಡಿ ಬಿದ್ದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ರಸ್ತೆಯಲ್ಲಿ ಬೃಹತ್ ಗುಂಡಿಗಳಿರುವುದರಿAದ ವಾಹನಗಳ ಓಡಾಟಕ್ಕೆ ಸಂಚಕಾರವಾಗಿದೆ. ಬಾಡಿಗೆ ವಾಹನಗಳು ಇತ್ತ ಆಗಮಿಸುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ತಕ್ಷಣ ಸಂಬAಧಪಟ್ಟ ಇಲಾಖೆ ಈ ಬಗ್ಗೆ ಗಮನ ಹರಿಸಿ ರಸ್ತೆಯ ಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.